34 Km ಮೈಲೇಜ್.. ಬರೀ 3,69,900 ರೂಪಾಯಿ, ಈ ಕಾರಿಗೆ ಮುಗಿಬಿದ್ದ ಜನ!

Maruti Suzuki Alto K10: 'ಮಾರುತಿ ಸುಜುಕಿ ಆಲ್ಟೊ ಕೆ10' ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಈ 2026 ಅಕ್ಟೋಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Nov 27, 2026 - 15:46
Nov 27, 2026 - 15:46
34 Km ಮೈಲೇಜ್.. ಬರೀ 3,69,900 ರೂಪಾಯಿ, ಈ ಕಾರಿಗೆ ಮುಗಿಬಿದ್ದ ಜನ!

Maruti Suzuki Alto K10: 'ಮಾರುತಿ ಸುಜುಕಿ ಆಲ್ಟೊ ಕೆ10' ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರಿಗೆ ಗ್ರಾಹಕರು ಮನಸೊತ್ತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. 

ಈ 2026 ಅಕ್ಟೋಬರ್ ತಿಂಗಳಲ್ಲಿ 11,523 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 6,210 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 86% ಪ್ರಗತಿಯಾಗಿದೆ. 

'ಮಾರುತಿ ಆಲ್ಟೊ ಕೆ10' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.3,69,900 ರಿಂದ ರೂ.5,44,900 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ (LXI), ವಿಎಕ್ಸ್ಐ (VXI) ಹಾಗೂ ವಿಎಕ್ಸ್ಐ ಪ್ಲಸ್ (VXI PLUS) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 

ನೂತನ 'ಆಲ್ಟೊ' ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು,  ಎಲ್ಇಡಿ ಟೈಲ್ ಲ್ಯಾಂಪ್‌ಗಳು & 13-ಇಂಚಿನ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಮತ್ತು ಮೆಟಾಲಿಕ್ ಸಿಜ್ಲಿಂಗ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. 

ಈ ಕಾರಿನಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 

ಹೊಸ 'ಆಲ್ಟೊ' ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.