Maruti Suzuki: 34 ಕಿ.ಮೀ ಮೈಲೇಜ್.. ಈ ಅಗ್ಗದ ಮಾರುತಿ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
Maruti Suzuki Alto K10: 'ಮಾರುತಿ ಸುಜುಕಿ ಆಲ್ಟೊ ಕೆ10' ಕಾರಿನ ಬೆಲೆಯೂ ಏರಿಕೆಯಾಗಿದೆ.
Maruti Suzuki Alto K10: ಮಾರುತಿ ಸುಜುಕಿ ಆಲ್ಟೊ ಕೆ10 ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಸದ್ಯ ಈ ಕಾರಿನ ಬೆಲೆಯನ್ನು ರೂಪಾಂತರಗಳಿಗೆ ಅನುಗುಣವಾಗಿ ರೂ.2,500 ವರೆಗೆ ಏರಿಕೆ ಮಾಡಲಾಗಿದೆ.
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.3.70 ಲಕ್ಷದಿಂದ ರೂ. 5.35 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ (ಒ), ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಿದೆ.
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಸ್ಟೀಲ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ & ಮೆಟಾಲಿಕ್ ಸಿಜ್ಲಿಂಗ್ ರೆಡ್ ಎಂಬ ಬಣ್ಣದೊಂದಿಗೂ ದೊರೆಯುತ್ತದೆ.
ನೂತನ 'ಆಲ್ಟೊ'ನಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 214 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.