ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಅತ್ಯುತ್ತಮವಾದ ಆಯ್ಕೆಯಾಗಿದೆ. ಬನ್ನಿ.. ಈ ಕಾರಿನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುತ್ತದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ವಿನ್ಯಾಸ & ಬಣ್ಣಗಳು Design & Colours):
ಈ ಕಾರು ತುಂಬಾನೇ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 13-ಇಂಚಿನ ಸ್ಟೀಲ್ ವೀಲ್‌ಗಳನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಹಾಗೂ ಮೆಟಾಲಿಕ್ ಸಿಜ್ಲಿಂಗ್ ರೆಡ್ ಎಂಬ ಬಣ್ಣದೊಂದಿಗೂ ಸಿಗುತ್ತದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space):
ನೂತನ 'ಆಲ್ಟೊ' 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಇದು ಬೆಲೆಗೆ ಉತ್ತಮವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ಮಾರುತಿ ಆಲ್ಟೊ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.