Maruti Baleno: 30 ಕಿ.ಮೀ ಮೈಲೇಜ್.. 5.99 ಲಕ್ಷ ರೂ.. ಮಾರುತಿ ಬಲೆನೊಗೆ ಮನಸೋತ ಜನ!

Maruti Suzuki Baleno: ಮಾರುತಿ ಸುಜುಕಿ ಬಲೆನೊ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಈ 2026ರ ಜುಲೈಯಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Aug 20, 2026 - 17:50
Maruti Baleno: 30 ಕಿ.ಮೀ ಮೈಲೇಜ್..  5.99 ಲಕ್ಷ ರೂ.. ಮಾರುತಿ ಬಲೆನೊಗೆ ಮನಸೋತ ಜನ!

ಮಾರುತಿ ಸುಜುಕಿ ಬಲೆನೊ (Maruti Suzuki Baleno) ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಈ 2026ರ ಜುಲೈಯಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 18,241 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 12,503 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 45.89% ಬೆಳವಣಿಗೆಯಾಗಿದೆ. 

'ಮಾರುತಿ ಬಲೆನೊ' ವಿಶೇಷತೆಗಳೇನು:

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.99 ಲಕ್ಷದಿಂದ ರೂ.9.17 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. 

ಈ ಕಾರು ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಮತ್ತು ಬ್ಲ್ಯೂಯಿಶ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಬಲೆನೊ' 5 ಆಸನಗಳನ್ನು ತನ್ನದಾಗಿಸಿಕೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 318 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ.  22 ರಿಂದ 30 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪವರ್ ಸ್ಟೀರಿಂಗ್ ಹಾಗೂ ಫಾಸ್ಟ್ ಚಾರ್ಜಿಂಗ್ ಯುಎಸ್‌‍ಬಿ ಪೋರ್ಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 

ಹೊಸ 'ಬಲೆನೊ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್-ಪಾರ್ಕಿಂಗ್ ಸೇನಾರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.