Maruti Baleno: 33.61 ಕಿ.ಮೀ ಮೈಲೇಜ್.. 6 ಲಕ್ಷ ರೂ.. ಮಾರುತಿ ಬಲೆನೊ ಖರೀದಿಗೆ ಮುಗಿಬಿದ್ದ ಜನ!

Maruti Suzuki Baleno Facelift: 2026ರ 'ಮಾರುತಿ ಸುಜುಕಿ ಬಲೆನೊ ಫೇಸ್‌ಲಿಫ್ಟ್' ಕಾರು ಮಾರಾಟಕ್ಕೆ ಬಂದ ಮೊದಲ ತಿಂಗಳಲ್ಲಿ ಬರೋಬ್ಬರಿ 25,000 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ.

Oct 5, 2026 - 20:21
Maruti Baleno: 33.61 ಕಿ.ಮೀ ಮೈಲೇಜ್.. 6 ಲಕ್ಷ ರೂ.. ಮಾರುತಿ ಬಲೆನೊ ಖರೀದಿಗೆ ಮುಗಿಬಿದ್ದ ಜನ!

Maruti Suzuki Baleno Facelift: ಇದೇ ಸೆ.5 ರಂದು 2026ರ 'ಮಾರುತಿ ಸುಜುಕಿ ಬಲೆನೊ ಫೇಸ್‌ಲಿಫ್ಟ್' ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಲಾಯಿತು. ಸದ್ಯ ಈ ಕಾರು ಮಾರಾಟಕ್ಕೆ ಬಂದ ಮೊದಲ ತಿಂಗಳಲ್ಲಿ ಬರೋಬ್ಬರಿ  25,000 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದ್ದು, ಇದರೊಂದಿಗೆ ಹೊಸ ಮೈಲಿಗಲ್ಲನ್ನು ಸಾಧಿಸಲಾಗಿದೆ. 

ನೂತನ 'ಬಲೆನೊ' ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.10 ಲಕ್ಷದಿಂದ ರೂ.9.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಫಾ ಮತ್ತು ಆಲ್ಫಾ (ಒ) ಎಂಬ ರೂಪಾಂತರದೊಂದಿಗೆ ಲಭ್ಯವಿದೆ.  

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಸ್ವೆಪ್ಟ್-ಬ್ಯಾಕ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಇಂಡಿಕೇಟರ್‌ಗಳು, ಶಾರ್ಕ್‌ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಎನಿಗ್ಮ್ಯಾಟಿಕ್ ಟೀಲ್, ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಆಫ್ಯುಲೆಂಟ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 

ಈ ಕಾರು ಶಕ್ತಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಸಿಎನ್‌ಜಿ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 23.80 ರಿಂದ 33.6 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಹೊಸ 'ಬಲೆನೊ' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5-ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 

ಇದು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಟ್ವಿನ್-ಡಯಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್,  6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.