Maruti Suzuki: 26.90 ಕಿ.ಮೀ ಮೈಲೇಜ್.. 5-ಸ್ಟಾರ್ ಸೇಫ್ಟಿ, ಈ ಕಾರಿಗೆ ಮನಸೋತ ಜನ!

Maruti Suzuki Brezza: ಈ 2026ರ ಆಗಸ್ಟ್ ತಿಂಗಳಲ್ಲಿ 'ಮಾರುತಿ ಸುಜುಕಿ ಬ್ರೆಝಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Sep 19, 2026 - 15:03
Maruti Suzuki: 26.90 ಕಿ.ಮೀ ಮೈಲೇಜ್.. 5-ಸ್ಟಾರ್ ಸೇಫ್ಟಿ, ಈ ಕಾರಿಗೆ ಮನಸೋತ ಜನ!

Maruti Suzuki Brezza ಮಾರುತಿ ಸುಜುಕಿ ಬ್ರೆಝಾ ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ 2026ರ ಆಗಸ್ಟ್ ತಿಂಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 15,288 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿವಲ್ಲಿ 13,620 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 12% ಬೆಳವಣಿಗೆಯಾಗಿದೆ. 

ಇತ್ತೀಚೆಗೆ, ಈ 'ಬ್ರೆಝಾ'ದ ಫೇಸ್‌ಲಿಫ್ಟ್ ಮಾಡೆಲ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಈ ಕಾರು ರೂ.7.40 ಲಕ್ಷದಿಂದ ರೂ.13.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ & ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.  

ನೂತನ 'ಮಾರುತಿ ಬ್ರೆಝಾ' ಅತ್ಯಾಕರ್ಷಕವಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.   

ಇದರಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 328 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್), 1.5- ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಹಾಗೂ 1-ಲೀ. ಟರ್ಬೊ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್) ಎಂಜಿನ್ ಆಯ್ಕೆಯನ್ನು ಹೊಂದಿದೆ. 19.96 ರಿಂದ  26.90 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಹೊಸ 'ಬ್ರೆಝಾ' ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ 6-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ, ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ. 6-ಏರ್‌ಬ್ಯಾಗ್‌, ಲೆವೆಲ್-1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.