Maruti Brezza: ಹೊಸ ಮಾರುತಿ ಬ್ರೆಝಾ SUVಗೆ ಮುಗಿಬಿದ್ದ ಜನ, 26.90 Km ಮೈಲೇಜ್.. 7.50 ಲಕ್ಷ ರೂ!

Maruti Suzuki Brezza: 'ಮಾರುತಿ ಸುಜುಕಿ ಬ್ರೆಝಾ' ಜನಪ್ರಿಯ ಎಸ್‌ಯುವಿಯಾಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಅಕ್ಟೋಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ.

Nov 19, 2026 - 14:53
Nov 19, 2026 - 14:55
Maruti Brezza: ಹೊಸ ಮಾರುತಿ ಬ್ರೆಝಾ SUVಗೆ ಮುಗಿಬಿದ್ದ ಜನ, 26.90 Km ಮೈಲೇಜ್.. 7.50 ಲಕ್ಷ ರೂ!

Maruti Suzuki Brezza: 'ಮಾರುತಿ ಸುಜುಕಿ ಬ್ರೆಝಾ' ಜನಪ್ರಿಯ ಎಸ್‌ಯುವಿಯಾಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಈ 2026ರ ಅಕ್ಟೋಬರ್ ತಿಂಗಳಲ್ಲಿ 22,436 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ  12,072 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 85.85% ಪ್ರಗತಿಯಾಗಿದೆ. 
 
'ಮಾರುತಿ ಬ್ರೆಝಾ' ವಿಶೇಷತೆಗಳೇನು: 
 
ಇದು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದ್ದು, ರೂ.7.40 ಲಕ್ಷದಿಂದ ರೂ.7.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. 
 
ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. 
 
ನೂತನ 'ಬ್ರೆಝಾ'ದಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 328 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
 
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್), 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್+ಸಿಎನ್‌ಜಿ ಮತ್ತು 1-ಲೀ. ಟರ್ಬೊ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್) ಎಂಜಿನ್ ಆಯ್ಕೆಯನ್ನು ಹೊಂದಿದೆ. 19.96 ರಿಂದ 26.90 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 
 
ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು 6-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.