Maruti: 26.90 ಕಿ.ಮೀ ಮೈಲೇಜ್.. ಬರೀ 7.40 ಲಕ್ಷ... ಈ ಕಾರಿಗೆ 'ಜೈ' ಎಂದ ಜನ!

Maruti Suzuki Brezza: ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ 'ಮಾರುತಿ ಸುಜುಕಿ ಬ್ರೆಝಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Oct 13, 2026 - 19:54
Oct 13, 2026 - 20:03
Maruti: 26.90 ಕಿ.ಮೀ ಮೈಲೇಜ್.. ಬರೀ 7.40 ಲಕ್ಷ... ಈ ಕಾರಿಗೆ 'ಜೈ' ಎಂದ ಜನ!

Maruti Suzuki Brezza: ಮಾರುತಿ ಸುಜುಕಿ ಬ್ರೆಝಾ ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 15,685 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿವಲ್ಲಿ 10,173 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ +54.2% ಬೆಳವಣಿಗೆಯಾಗಿದೆ.
 
'ಮಾರುತಿ ಬ್ರೆಝಾ' ವಿಶೇಷತೆಗಳೇನು:
 
ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.7.40 ಲಕ್ಷದಿಂದ ರೂ.13.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. 

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ನೋಡುಗರನ್ನು ಸೆಳೆಯಬಲ್ಲದು. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಬ್ರೆಝಾ' ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್), 1.5- ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್+ಸಿಎನ್‌ಜಿ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್) ಎಂಜಿನ್ ಆಯ್ಕೆಯನ್ನು ಪಡೆದಿದೆ. 19.96 ರಿಂದ 26.90 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರಿನಲ್ಲಿ 5-ಆಸನಗಳಿವೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು 6-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಗಾಗಿ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಲೆವೆಲ್-1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.