Maruti Suzuki: ರೂ.4.70 ಲಕ್ಷ.. 34.43 ಕಿ.ಮೀ ಮೈಲೇಜ್.. ಈ ಕಾರಿಗೆ ಫುಲ್ ಡಿಮ್ಯಾಂಡ್!

Maruti Suzuki Celerio: ಈ 2026ರ ಆಗಸ್ಟ್ ತಿಂಗಳಲ್ಲೂ 'ಮಾರುತಿ ಸುಜುಕಿ ಸೆಲರಿಯೊ' ಹ್ಯಾಚ್‌ಬ್ಯಾಕ್ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Sep 21, 2026 - 16:39
Maruti Suzuki: ರೂ.4.70 ಲಕ್ಷ.. 34.43 ಕಿ.ಮೀ ಮೈಲೇಜ್.. ಈ ಕಾರಿಗೆ ಫುಲ್ ಡಿಮ್ಯಾಂಡ್!

Maruti Suzuki Celerio: ಮಾರುತಿ ಸುಜುಕಿ ಸೆಲರಿಯೊ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ 2026ರ ಆಗಸ್ಟ್ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,990 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,505 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 99% ಪ್ರಗತಿಯಾಗಿದೆ.

ಈ ಕಾರು ರೂ.4.70 ಲಕ್ಷದಿಂದ ರೂ.6.75 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. 

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪೀಡಿ ಬ್ಲೂ, ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಕೆಫೀನ್ ಬ್ರೌನ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 

ಹೊಸ 'ಸೆಲೆರಿಯೊ' 5 ಆಸನಗಳನ್ನು ಹೊಂದಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 313 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ.  24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 

ಇದು ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಐಡಲ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, 6-ಏರ್‌ಬ್ಯಾಗ್‌ಗಳು ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.