Maruti Celerio: 4.70 ಲಕ್ಷ ರೂ.. 34 ಕಿ.ಮೀ ಮೈಲೇಜ್, ಮಾರುತಿ ಸೆಲೆರಿಯೊ ಕುರಿತ ಪ್ರಮುಖಾಂಶಗಳು!

Maruti Suzuki Celerio: ನೀವು ಹೊಸ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಮಾರುತಿ ಸುಜುಕಿ ಸೆಲೆರಿಯೊ' ಹ್ಯಾಚ್‌ಬ್ಯಾಕ್ ಅತ್ಯುತ್ತಮ ಆಯ್ಕೆಯಾಗಲಿದೆ.

Jul 28, 2026 - 13:43
Jul 28, 2026 - 14:50
Maruti Celerio: 4.70 ಲಕ್ಷ ರೂ.. 34 ಕಿ.ಮೀ ಮೈಲೇಜ್, ಮಾರುತಿ ಸೆಲೆರಿಯೊ ಕುರಿತ ಪ್ರಮುಖಾಂಶಗಳು!

ನೀವು ಹೊಸ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio)  ಹ್ಯಾಚ್‌ಬ್ಯಾಕ್ ಅತ್ಯುತ್ತಮ ಆಯ್ಕೆಯಾಗಲಿದೆ. ಬನ್ನಿ.. ಈ ಕಾರಿನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ. 

ಬೆಲೆ & ರೂಪಾಂತರಗಳು (Price & Variants):

ಇದು ಅಗ್ಗದ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ & ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 

ವಿನ್ಯಾಸ & ಬಣ್ಣಗಳು Design & Colours):

ಈ ಕಾರು ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ, ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಕೆಫೀನ್ ಬ್ರೌನ್ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space): 

ನೂತನ 'ಸೆಲೆರಿಯೊ' 5 ಆಸನಗಳನ್ನು ಪಡೆದಿದ್ದು, ಹೆಚ್ಚಿನ ಲಗೇಜ್ ಸಾಗಿಸಲು 313 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 

ಕಾರ್ಯಕ್ಷಮತೆ (Performance): 

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ.  24 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 

ವೈಶಿಷ್ಟ್ಯಗಳು (Features):

ಈ ಕಾರಿನ ವಿನ್ಯಾಸವು ಚೆನ್ನಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಐಡಲ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ನ್ನು ಹೊಂದಿದೆ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 8 ವರ್ಷಕ್ಕೂ ಹೆಚ್ಚಿನ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.