Maruti Dzire: ಸೆಡಾನ್ ವಿಭಾಗದಲ್ಲಿ ಮಾರುತಿ ಡಿಜೈರ್ ನಂ 1.. 6.26 ಲಕ್ಷ ರೂ, 33.73 Km ಮೈಲೇಜ್
Maruti Suzuki Dzire: 'ಮಾರುತಿ ಸುಜುಕಿ ಡಿಜೈರ್' ಈ 2026ರ ಆಗಸ್ಟ್ ತಿಂಗಳಲ್ಲಿ ಸೆಡಾನ್ ವಿಭಾಗದಲ್ಲಿ ನಂ.1 ಕಾರಾಗಿ ಹೊರಹೊಮ್ಮಿದೆ.
Maruti Suzuki Dzire: 'ಮಾರುತಿ ಸುಜುಕಿ ಡಿಜೈರ್' ಈ 2026ರ ಆಗಸ್ಟ್ ತಿಂಗಳಲ್ಲಿ ಸೆಡಾನ್ ವಿಭಾಗದಲ್ಲಿ ನಂ.1 ಕಾರಾಗಿ ಹೊರಹೊಮ್ಮಿದೆ. ಒಟ್ಟು 18,418 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 16,509 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 11.6% ಬೆಳವಣಿಗೆಯಾಗಿದೆ.
ಈ ಕಾರು ರೂ.6.26 ಲಕ್ಷದಿಂದ ರೂ.9.41 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಡಿಜೈರ್'ನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಧ್ಯವಾಗುವಂತೆ 382 ಲೀ.ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ.
ಈ ಕಾರು ಶಕ್ತಿಶಾಲಿಯಾದ 2 ವಿಭಿನ್ನ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.79 ರಿಂದ 33.73 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇದು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಸೌಂಡ್ ಸಿಸ್ಟಮ್ & ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯೊಂದ 6 ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ತ್ರಿ-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.