ನಂ.1 ಆಯ್ತು ಮಾರುತಿ ಡಿಜೈರ್.. ಮುಗಿಬಿದ್ದ ಜನ.. 6 ಲಕ್ಷ ರೂ.. 33.73 Km ಮೈಲೇಜ್!
Maruti Suzuki Dzire: 'ಮಾರುತಿ ಸುಜುಕಿ ಡಿಜೈರ್' ಸೆಡಾನ್ ಈ 2026ರ ಜುಲೈನಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವುದರೊಂದಿಗೆ ನಂಬರ್ 1 ಕಾರಾಗಿ ಹೊರಹೊಮ್ಮಿದೆ.
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಮುಖ ಸೆಡಾನ್ ಆಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜುಲೈನಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವುದರೊಂದಿಗೆ ನಂಬರ್ 1 ಕಾರಾಗಿ ಹೊರಹೊಮ್ಮಿದೆ. ಒಟ್ಟು 23,791 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 20,895 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 13.86% ಪ್ರಗತಿಯಾಗಿದೆ.
ಮಾರುತಿ ಡಿಜೈರ್ ವಿಶೇಷತೆಗಳೇನು:
ಇದು ರೂ.6.26 ಲಕ್ಷದಿಂದ ರೂ.9.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಹಾಗೂ ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ & ಮ್ಯಾಗ್ಮಾ ಗ್ರೇ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ನೂತನ 'ಡಿಜೈರ್' ಸೆಡಾನ್ 5-ಸೀಟುಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ದೂರುಗಳಿಗೆ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಬರೋಬ್ಬರಿ 382 ಲೀ. ಗಾತ್ರದ ಬೂಟ್ ಸ್ಪೇನ್‌ನ್ನು ಪಡೆದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.79 ರಿಂದ 33.73 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ರೇರ್-ಎಸಿ ವೆಂಟ್‌ಗಳಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ 'ಡಿಜೈರ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.