Maruti Dzire: 6 ಲಕ್ಷ ರೂ.. 33.73 Km ಮೈಲೇಜ್.. ಮಾರುತಿ ಡಿಜೈರ್ ಕಾರಿಗೆ ಮುಗಿಬಿದ್ದ ಜನ!
Maruti Suzuki Dzire June 2026 Sales Report: ಈ 2026 ಜೂನ್ ತಿಂಗಳಲ್ಲಿ 'ಮಾರುತಿ ಸುಜುಕಿ ಡಿಜೈರ್' ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಂಗಳೂರು: ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿದೆ. ಈ ಕಾರಿಗೆ ಗ್ರಾಹಕರು ಮನಸೊತ್ತಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ 2026 ಜೂನ್ ತಿಂಗಳಲ್ಲಿ 17,899 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 15,484 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ವಿಶ್ಲೇಷಿಸಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 16% ಪ್ರಗತಿಯಾಗಿದೆ.
ಇದು ರೂ.6.26 ಲಕ್ಷದಿಂದ ರೂ.9.36 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ & ಜಡ್ಎಕ್ಸ್ಐ ಪ್ಲಸ್ ಎಂಬ ವೇರಿಯೆಂಟ್ ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಕಾರು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ಮಾರುತಿ ಡಿಜೈರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.79 ರಿಂದ 33.73 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಸೆಡಾನ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


