Maruti Suzuki: 27 Km ಮೈಲೇಜ್.. ಬರೀ 5.21 ಲಕ್ಷ, 6-ಸೀಟರ್.. ಈ ಕಾರಿಗೆ ಫುಲ್ ಡಿಮ್ಯಾಂಡ್!
Maruti Suzuki Eeco: ಸದ್ಯ 'ಮಾರುತಿ ಸುಜುಕಿ ಇಕೋ' ಎಂಪಿವಿ ಮಾರಾಟದಲ್ಲಿ ಹೊಸ ಇತಿಹಾಸ ಬರೆಯಲಾಗಿದೆ.
ಮಾರುತಿ ಸುಜುಕಿ ಇಕೋ (Maruti Suzuki Eeco) ಜನಪ್ರಿಯ ಎಂಪಿವಿಯಾಗಿದೆ. ಈ ಕಾರಿಗೆ ಗ್ರಾಹಕರು ಕೂಡ ಮನಸೊತ್ತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಇದೇ ಎಂಪಿವಿ ಮಾರಾಟದಲ್ಲಿ ಹೊಸ ಇತಿಹಾಸ ಬರೆಯಲಾಗಿದೆ. 2010ರಲ್ಲಿ 'ಇಕೋ' ಮೊದಲ ಬಾರಿಗೆ ಬಿಡುಗಡೆಗೊಂಡಿತ್ತು. ಅಲ್ಲಿಂದ ಇಲ್ಲಿಯವರೆಗೆ 15 ಲಕ್ಷ ಯುನಿಟ್‌ಗಳನ್ನು ಮಾರಲಾಗಿದೆ.
'ಮಾರುತಿ ಇಕೋ' ವಿಶೇಷತೆಗಳೇನು:
ಇದು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.5.21 ಲಕ್ಷದಿಂದ ರೂ.6.46 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮಧ್ಯಮ ವರ್ಗದ ಜನರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು.
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಮತ್ತು ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಸಾಲಿಡ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಬ್ರಿಸ್ಕ್ ಬ್ಲೂ, ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ & ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2350 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಇಕೋ' 5 ಮತ್ತು 6 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 275 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೋ ಸಿಸ್ಟಮ್, ಮ್ಯಾನುವಲ್ ಎಸಿ, 12ವಿ-ಚಾರ್ಜಿಂಗ್ ಸಾಕೆಟ್ ಹಾಗೂ ರೇರ್ - ಪಾರ್ಕಿಂಗ್ ಸೆನ್ಸಾರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.