26 ಕಿ.ಮೀ ಮೈಲೇಜ್.. 7-ಸೀಟರ್.. ಈ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್!

Maruti Suzuki Ertiga: ಮಾರುತಿ ಸುಜುಕಿ ಎರ್ಟಿಗಾ ಜನಪ್ರಿಯ ಎಂಪಿವಿಯಾಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜುಲೈನಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Aug 10, 2026 - 14:12
26 ಕಿ.ಮೀ ಮೈಲೇಜ್.. 7-ಸೀಟರ್.. ಈ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್!

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಜನಪ್ರಿಯ ಎಂಪಿವಿಯಾಗಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜುಲೈನಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ನಂ.3 ಸ್ಥಾನದಲ್ಲಿದ್ದು, ಒಟ್ಟು 21,606 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 16,604 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 30% ಪ್ರಗತಿಯಾಗಿದೆ. 

ಇದು ರೂ.10.60 ಲಕ್ಷದಿಂದ ರೂ.16.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ  ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. 

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ, ಡಿಗ್ನಿಟಿ ಬ್ರೌನ್ ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,740 ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಎರ್ಟಿಗಾ' 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209  ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.  

ಇದು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20 ರಿಂದ 26.11 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.