Maruti Suzuki: 26 ಕಿ.ಮೀ ಮೈಲೇಜ್.. 7-ಸೀಟರ್, ಈ ಮಾರುತಿ ಕಾರಿನ ಬೆಲೆ ಏರಿಕೆ.. ಎಷ್ಟು?
Maruti Suzuki Ertiga: ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಬೆಲೆಯು ರೂ.7,500 ವರೆಗೆ ಏರಿಕೆಯಾಗಿದೆ.
Maruti Suzuki Ertiga: 'ಮಾರುತಿ ಸುಜುಕಿ ಎರ್ಟಿಗಾ' ಪ್ರಖ್ಯಾತ ಎಂಪಿವಿಯಾಗಿದೆ. ಸದ್ಯ ಈ ಕಾರಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.5,000 ರಿಂದ ರೂ.7,500 ವರೆಗೆ ಹೆಚ್ಚಿಸಲಾಗಿದ್ದು, ರೂ.8.90 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಪಡೆದಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,740 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ ಹಾಗೂ ಪರ್ಲ್ ಮೆಟಾಲಿಕ್ ಡಿಗ್ನಿಟಿ ಬ್ರೌನ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರಿನಲ್ಲಿ 7 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಹೊಸ 'ಎರ್ಟಿಗಾ' ಉತ್ತಮವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 20 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇದು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿಯನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ಹಿಲ್ ಹೋಲ್ಡ್ ಅಸಿಸ್ಟ್‌ನ್ನು ಒಳಗೊಂಡಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.