Maruti Fronx: 28.51 ಕಿ.ಮೀ ಮೈಲೇಜ್.. ಮಾರುತಿ ಫ್ರಾಂಕ್ಸ್ ಕಾರಿಗೆ ಫುಲ್ ಡಿಮ್ಯಾಂಡ್, ಭಾರೀ ಸಂಖ್ಯೆಯಲ್ಲಿ ಸೇಲ್ಸ್!
Maruti Suzuki Fronx: ಈ 2026ರ ಸೆಪ್ಟಂಬರ್ ತಿಂಗಳಲ್ಲಿ 'ಮಾರುತಿ ಸುಜುಕಿ ಫ್ರಾಂಕ್ಸ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
Maruti Suzuki Fronx: 'ಮಾರುತಿ ಸುಜುಕಿ ಫ್ರಾಂಕ್ಸ್' ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ 2026ರ ಸೆಪ್ಟಂಬರ್ ತಿಂಗಳಲ್ಲಿ 19,282 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 13,767 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ +40% ಬೆಳವಣಿಗೆಯಾಗಿದೆ.
'ಮಾರುತಿ ಫ್ರಾಂಕ್ಸ್' ಹೇಗಿದೆ:
ಇದು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ & ಆಲ್ಫಾ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.
ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರೇಂಡಿಯರ್ ಗ್ರೇ ಮತ್ತು ಆಪುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ 'ಫ್ರಾಂಕ್ಸ್'ನಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.01 ರಿಂದ 28.51 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್ ಹಾಗೂ ರೇರ್-ಎಸಿ ವೆಂಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳಿವೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.