Maruti Suzuki: 28.51 ಕಿ.ಮೀ ಮೈಲೇಜ್.. 5-ಸೀಟರ್.. ಈ ಕಾರಿಗೆ ಫುಲ್ ಡಿಮ್ಯಾಂಡ್!
Maruti Suzuki Fronx: 'ಮಾರುತಿ ಸುಜುಕಿ ಫ್ರಾಂಕ್ಸ್' ಜನಪ್ರಿಯ ಎಸ್‌ಯುವಿಯಾಗಿದ್ದು, ಈ 2026ರ ಆಗಸ್ಟ್ ತಿಂಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಪ್ರಿಯ ಎಸ್‌ಯುವಿಯಾಗಿದ್ದು, ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ 2026ರ ಆಗಸ್ಟ್ ತಿಂಗಳಲ್ಲಿ 18,730 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 12,422 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 51% ಪ್ರಗತಿಯಾಗಿದೆ.
'ಮಾರುತಿ ಫ್ರಾಂಕ್ಸ್' ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ & ಆಲ್ಫಾ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರೇಂಡಿಯರ್ ಗ್ರೇ ಹಾಗೂ ಆಪುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಫ್ರಾಂಕ್ಸ್'ನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಜಾಸ್ತಿ ಲಗೇಜ್ ಕೊಂಡೊಯ್ಯಲು 308 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 20.01 ರಿಂದ 28.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಮತ್ತು ರೇರ್-ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಫ್ರಾಂಕ್ಸ್' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ನೀಡುತ್ತದೆ. ಸುರಕ್ಷತೆಯ ಹಿತದೃಷ್ಟಿಯಿಂದ 6-ಏರ್‌ಬ್ಯಾಗ್, ಇಎಸ್‌ಪಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಪ್ರೋಗ್ರಾಂ), ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.