Maruti Suzuki 27.97 ಕಿ.ಮೀ ಮೈಲೇಜ್.. ಈ SUVಗೆ ಮನಸೋತ ಜನ!
Maruti Suzuki Grand Vitara: ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ 'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
Maruti Suzuki Grand Vitara: 'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ' ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಗ್ರಾಹಕರು ಕೂಡ ಮನಸೋತ್ತಿದ್ದಾರೆ. ಈ 2026ರ ಸೆಪ್ಟೆಂಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ಒಟ್ಟು 8,513 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ.
'ಮಾರುತಿ ಗ್ರ್ಯಾಂಡ್ ವಿಟಾರಾ' ವಿಶೇಷತೆಗಳೇನು:
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.10.77 ಲಕ್ಷದಿಂದ ರೂ.19.77 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ, ಆಲ್ಫಾ & ಆಲ್ಫಾ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.
ಈ ಎಸ್‌ಯುವಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ & 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಗ್ರ್ಯಾಂಡ್ ವಿಟಾರಾ'ದಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 373 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ಗಳನ್ನು ಪಡೆದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19.38 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್,ವೈರ್‌ಲೆಸ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗೆ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.