Maruti Suzuki: 5.35 ಲಕ್ಷ ರೂ.. 21 Km ಮೈಲೇಜ್.. ಈ ಕಾರು ಮಿಡಲ್ ಕ್ಲಾಸ್ ಜನರಿಗೆ ಫರ್ಫೆಕ್ಟ್!

Maruti Suzuki Ignis: ನೀವು ಬಜೆಟ್ ಬೆಲೆಯಲ್ಲಿ ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಇಗ್ನಿಸ್ ಬೆಸ್ಟ್ ಚಾಯ್ಸ್ ಆಗಲಿದೆ.

Sep 6, 2026 - 17:51
Maruti Suzuki: 5.35 ಲಕ್ಷ ರೂ.. 21 Km ಮೈಲೇಜ್.. ಈ ಕಾರು ಮಿಡಲ್ ಕ್ಲಾಸ್ ಜನರಿಗೆ ಫರ್ಫೆಕ್ಟ್!

ನೀವು ಬಜೆಟ್ ಬೆಲೆಯಲ್ಲಿ ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಹ್ಯಾಚ್‌ಬ್ಯಾಕ್ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ. 

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.5.35 ಲಕ್ಷದಿಂದ ರೂ.7.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. 

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ & ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಇಗ್ನಿಸ್' ಏಕೈಕವಾದ 1.2-ಲೀ. ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 20.89 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಇದು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 260 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಪವರ್ ವಿಂಡೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 

ಹೊಸ 'ಇಗ್ನಿಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 2-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೆಂಟ್ರಲ್ ಲಾಕಿಂಗ್ ಹಾಗೂ ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌ಗಳನ್ನು ಪಡೆದಿದೆ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.