Maruti Ignis: 21 Km ಮೈಲೇಜ್.. ರೂ.5.35 ಲಕ್ಷ.. ಮಾರುತಿ ಇಗ್ನಿಸ್ ಕುರಿತ ವಿಶೇಷತೆಗಳೇನು?

Maruti Suzuki Ignis: ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಮಾರುತಿ ಸುಜುಕಿ ಇಗ್ನಿಸ್' ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅತ್ಯುತ್ತಮವಾದ ಆಯ್ಕೆಯಾಗಲಿದೆ.

Jul 29, 2026 - 20:20
Maruti Ignis: 21 Km ಮೈಲೇಜ್.. ರೂ.5.35 ಲಕ್ಷ.. ಮಾರುತಿ ಇಗ್ನಿಸ್ ಕುರಿತ ವಿಶೇಷತೆಗಳೇನು?

ಹೊಸ ಕಾರು ಖರೀದಿಸಬೇಕೆಂಬುದು ಪ್ರತಿಯೊಬ್ಬರಿಗೂ ಕನಸಾಗಿರುತ್ತದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅತ್ಯುತ್ತಮವಾದ ಆಯ್ಕೆಯಾಗಲಿದೆ. 
 
ಬೆಲೆ & ರೂಪಾಂತರಗಳು (Price & Variants):

ಇದು 'ನೆಕ್ಸಾ' ಶೋರೂಂನಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದ್ದು, ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ. 

ವಿನ್ಯಾಸ & ಬಣ್ಣಗಳು (Design & Colours):

ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನೋಡುಗರ ಕಣ್ಮನ ಸೆಳೆಯುತ್ತದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಹಾಗೂ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space): 

ನೂತನ 'ಮಾರುತಿ ಇಗ್ನಿಸ್' 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance): 

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 20.89 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪವರ್ ವಿಂಡೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 2-ಏರ್‌ಬ್ಯಾಗ್‌ಗಳು, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌ಗಳನ್ನು ಪಡೆದಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.