33 ಕಿ.ಮೀ ಮೈಲೇಜ್.. 5.79 ಲಕ್ಷ ರೂ.. 'ಮಾರುತಿ ಸ್ವಿಫ್ಟ್'ಗೆ ಫುಲ್ ಡಿಮ್ಯಾಂಡ್!
Maruti Suzuki Swift: ಮಾರುತಿ ಸುಜುಕಿ ಸ್ವಿಫ್ಟ್ ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಈ 2026ರ ಜುಲೈನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು ದಶಕಗಳಿಂದ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜುಲೈನಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 21,538 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 15,215 ಯುನಿಟ್‌ಗಳನ್ನು ಮಾರಲಾಗಿದೆ. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 41.56% ಬೆಳವಣಿಗೆಯಾಗಿದೆ.
'ಮಾರುತಿ ಸ್ವಿಫ್ಟ್' ವಿಶೇಷತೆಗಳೇನು:
ಇದು ರೂ.5.79 ಲಕ್ಷದಿಂದ ರೂ.8.89 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಹಾಗೂ ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು & ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ಸ್ವಿಫ್ಟ್' 5-ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 265 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಭರ್ಜರಿಯಾಗಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಹಾಗೂ ಪುಶ್-ಬಟನ್ ಸ್ಟಾರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.