ಬೈಕ್‌ನಂತೆ 33 ಕಿ.ಮೀ ಮೈಲೇಜ್.. ಬರೀ 5,83,900 ರೂ, ಈ ಕಾರಿಗೆ ಫುಲ್ ಡಿಮ್ಯಾಂಡ್!

Maruti Suzuki Swift: ಈ 2026ರ ಸೆಪ್ಟಂಬರ್ ತಿಂಗಳಲ್ಲೂ 'ಮಾರುತಿ ಸುಜುಕಿ ಸ್ವಿಫ್ಟ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Oct 10, 2026 - 11:37
ಬೈಕ್‌ನಂತೆ 33 ಕಿ.ಮೀ ಮೈಲೇಜ್..  ಬರೀ 5,83,900 ರೂ, ಈ ಕಾರಿಗೆ ಫುಲ್ ಡಿಮ್ಯಾಂಡ್!

Maruti Suzuki Swift: 'ಮಾರುತಿ ಸುಜುಕಿ ಸ್ವಿಫ್ಟ್' ಪ್ರಖ್ಯಾತ ಹ್ಯಾಚ್‌ಬ್ಯಾಕ್‌ ಆಗಿ ಹೊರಹೊಮ್ಮಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಸೆಪ್ಟಂಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 17,399 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. 2025ರ ಇದೇ ಅವಧಿಯಲ್ಲಿ 15,547 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ +12% ಪ್ರಗತಿಯಾಗಿದೆ. 
 
'ಮಾರುತಿ ಸ್ವಿಫ್ಟ್' ವಿಶೇಷತೆಗಳೇನು:
 
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.84 ಲಕ್ಷದಿಂದ ರೂ.8.89 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಹಾಗೂ ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.
 
ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ನೋಡಲು ಕೂಡ ಚೆನ್ನಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
 
ನೂತನ 'ಮಾರುತಿ ಸ್ವಿಫ್ಟ್'ನಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 265 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
 
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.80 ರಿಂದ 32.85 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 
 
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಹಾಗೂ ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ನಾನಾ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.