Maruti Victoris: 28.65 ಕಿ.ಮೀ ಮೈಲೇಜ್.. 10.50 ಲಕ್ಷ.. ಮಾರುತಿ ವಿಕ್ಟೋರಿಸ್ ಕಾರಿಗೆ ಮನಸೋತ ಜನ!

Maruti Suzuki Victoris: ಮಾರುತಿ ಸುಜುಕಿ ವಿಕ್ಟೋರಿಸ್ ಜನಪ್ರಿಯ ಎಸ್‌ಯುವಿಯಾಗಿದ್ದು, ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. 2026ರ ಜುಲೈನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Aug 11, 2026 - 16:07
Maruti Victoris: 28.65 ಕಿ.ಮೀ ಮೈಲೇಜ್.. 10.50 ಲಕ್ಷ.. ಮಾರುತಿ ವಿಕ್ಟೋರಿಸ್ ಕಾರಿಗೆ ಮನಸೋತ ಜನ!

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಜನಪ್ರಿಯ ಎಸ್‌ಯುವಿಯಾಗಿದ್ದು, ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. 2026ರ ಜುಲೈನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 11,334 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 

'ಮಾರುತಿ ವಿಕ್ಟೋರಿಸ್' ವಿಶೇಷತೆಗಳೇನು:

ಇದು ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. 

ಈ ಎಸ್‌ಯುವಿ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ & ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.  210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ವಿಕ್ಟೋರಿಸ್' 5-ಸೀಟುಗಳನ್ನು ಹೊಂದಿದ್ದು, ಜಾಸ್ತಿ ಲಗೇಜ್ ಕೊಂಡೊಯ್ಯಲು 373 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21.06 ರಿಂದ 28.65 ಕಿ.ಮೀವರಗೆ ಮೈಲೇಜ್ ಕೊಡುತ್ತದೆ. 

ಈ ಎಸ್‌ಯುವಿಯ ವಿನ್ಯಾಸವು ಚೆನ್ನಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) & 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.