Maruti Victoris: ಜನರ ಮನಗೆದ್ದ 'ಮಾರುತಿ ವಿಕ್ಟೋರಿಸ್' SUV!

Maruti Suzuki Victoris: ಈ 2026ರ ಜೂನ್ ತಿಂಗಳಲ್ಲಿ 10,035 ಯುನಿ‍‍ಟ್‍‍ 'ಮಾರುತಿ ಸುಜುಕಿ ವಿಕ್ಟೋರಿಸ್' ಕಾರುಗಳನ್ನು ಮಾರಾಟಗೊಳಿಸಲಾಗಿದೆ.

Jul 16, 2026 - 14:48
Jul 16, 2026 - 19:33
Maruti Victoris: ಜನರ ಮನಗೆದ್ದ 'ಮಾರುತಿ ವಿಕ್ಟೋರಿಸ್' SUV!
ಬೆಂಗಳೂರು: ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜೂನ್ ತಿಂಗಳಲ್ಲಿ 10,035 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಲಾಗಿದೆ. 
 
ಇದು ರೂ.10.49 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಸೇರಿದಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 
 
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್ & ಮ್ಯಾಗ್ಮಾ ಗ್ರೇ ಬಣ್ಣಗಳೊಂದಿಗೂ ದೊರೆಯುತ್ತದೆ. 
 
ನೂತನ 'ವಿಕ್ಟೋರಿಸ್' 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 
 
ಇದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ.  21.06 ರಿಂದ 28.65 ಕಿ.ಮೀವರಗೆ ಮೈಲೇಜ್ ಕೊಡುತ್ತದೆ. 
 
ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.