Maruti Suzuki: 29 Km ಮೈಲೇಜ್.. 5-ಸ್ಟಾರ್ ಸೇಫ್ಟಿ, ಈ ಮಾರುತಿ SUVಗೆ ಮುಗಿಬಿದ್ದ ಗ್ರಾಹಕರು!
Maruti Suzuki Victoris: ಈ 2026 ಅಕ್ಟೋಬರ್‌ನಲ್ಲಿಯೂ 'ಮಾರುತಿ ಸುಜುಕಿ ವಿಕ್ಟೋರಿಸ್' ಎಸ್‌ಯುವಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
Maruti Suzuki Victoris: ಮಾರುತಿ ಸುಜುಕಿ ವಿಕ್ಟೋರಿಸ್ ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಗ್ರಾಹಕರು ಕೂಡ ಮನಸೋತಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ 2026 ಅಕ್ಟೋಬರ್‌ನಲ್ಲಿ ಒಟ್ಟು 16,792 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 13,496 ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 24% ಪ್ರಗತಿಯಾಗಿದೆ.
'ಮಾರುತಿ ವಿಕ್ಟೋರಿಸ್' ವಿಶೇಷತೆಗಳೇನು:
ಇದು ರೂ.10.49 ಲಕ್ಷದಿಂದ ರೂ.20.22 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಹಾಗೂ ಝಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಹೊಸ 'ವಿಕ್ಟೋರಿಸ್'ನಲ್ಲಿ 5-ಆಸನಗಳಿದ್ದು, 373 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 21.06 ರಿಂದ 28.65 ಕಿ.ಮೀವರಗೆ ಮೈಲೇಜ್ ನೀಡುತ್ತದೆ.
ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿ ಸೇರಿ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ.
ನೂತನ 'ಮಾರುತಿ ವಿಕ್ಟೋರಿಸ್' ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.