Maruti Suzuki WagonR: 'ಮಾರುತಿ ಸುಜುಕಿ ವ್ಯಾಗನ್ಆರ್' ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ 2026ರ ಆಗಸ್ಟ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ನಂ.2 ಸ್ಥಾನಕ್ಕೆ ಏರಿದೆ. ಒಟ್ಟು 20,180 ಯುನಿಟ್‍ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 14,552 ಮಾರಲಾಗಿದೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 39% ಬೆಳವಣಿಗೆಯಾಗಿದೆ.
ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.
ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 14-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ & ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ 'ಮಾರುತಿ ವ್ಯಾಗನ್ಆರ್' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 23 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರು 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 341 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಇದು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿ ಸೇರಿ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.