Maruti: 34 ಕಿ.ಮೀ ಮೈಲೇಜ್.. 4.99 ಲಕ್ಷ ರೂ.. ಈ ಮಾರುತಿ ಕಾರಿಗೆ ಮನಸೋತ ಜನ!

Maruti Suzuki WagonR: ಮಾರುತಿ ಸುಜುಕಿ ವ್ಯಾಗನ್ಆರ್ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಈ 2026 ಅಕ್ಟೋಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ.

Nov 23, 2026 - 18:07
Nov 23, 2026 - 18:08
Maruti: 34 ಕಿ.ಮೀ ಮೈಲೇಜ್.. 4.99 ಲಕ್ಷ ರೂ.. ಈ ಮಾರುತಿ ಕಾರಿಗೆ ಮನಸೋತ ಜನ!

Maruti Suzuki WagonR: ಮಾರುತಿ ಸುಜುಕಿ ವ್ಯಾಗನ್ಆರ್ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಈ ಕಾರಿಗೆ ಗ್ರಾಹಕರು ಕೂಡ ಮನಸೋತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. 

ಈ 2026 ಅಕ್ಟೋಬರ್ ತಿಂಗಳಲ್ಲಿ ಒಟ್ಟು 23,747 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 18,970 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 25.18% ಪ್ರಗತಿಯಾಗಿದೆ. 

'ಮಾರುತಿ ವ್ಯಾಗನ್ಆರ್' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದ್ದು, ರೂ.4.99 ಲಕ್ಷದಿಂದ ರೂ.7.24 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ ವಿಎಕ್ಸ್ಐ, ಜಡ್ಎಕ್ಸ್ಐ ಹಾಗೂ ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. 

ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್  ಹಾಗೂ ಮೆಟಾಲಿಕ್ ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಇದರಲ್ಲಿ 5-ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 341 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ 'ವ್ಯಾಗನ್ಆರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ.ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.