34 ಕಿ.ಮೀ ಮೈಲೇಜ್.. 4.99 ಲಕ್ಷ ರೂ.. ಇದೇ ನಂ.2 ಕಾರು!

Maruti Suzuki WagonR: ಈ 2026ರ ಜುಲೈನಲ್ಲಿ 'ಮಾರುತಿ ಸುಜುಕಿ ವ್ಯಾಗನ್ಆರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ನಂ.2 ಸ್ಥಾನದಲ್ಲಿದೆ.

Aug 8, 2026 - 14:45
Aug 8, 2026 - 15:06
34 ಕಿ.ಮೀ ಮೈಲೇಜ್.. 4.99 ಲಕ್ಷ ರೂ.. ಇದೇ ನಂ.2 ಕಾರು!

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜನಮೆಚ್ಚಿದ ಹ್ಯಾಚ್‌ಬ್ಯಾಕ್ ಆಗಿದೆ. ಈ 2026ರ ಜುಲೈನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, 'ಮಾರುತಿ ಡಿಜೈರ್' ಬಳಿಕ ನಂಬರ್ 2 ಸ್ಥಾನದಲ್ಲಿದೆ. ಒಟ್ಟು 23,398 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರಲ್ಲಿ 14,710 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 59% ಬೆಳವಣಿಗೆಯಾಗಿದೆ. 

ನೂತನ 'ಮಾರುತಿ ಸುಜುಕಿ ವ್ಯಾಗನ್ಆರ್' ವಿಶೇಷತೆಗಳೇನು: 

ಇದು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.4.99 ಲಕ್ಷದಿಂದ ರೂ.7.24 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು & 14-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ ಮತ್ತು ಪರ್ಲ್ ಮೆಟಾಲಿಕ್ ಪೂಲ್‌ಸೈಡ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ವ್ಯಾಗನ್ಆರ್' 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 23 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ & ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.