Maruti WagonR: ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿಗೆ ಜೈ ಎಂದ ಜನ!

Maruti Suzuki WagonR: 'ಮಾರುತಿ ಸುಜುಕಿ ವ್ಯಾಗನ್ಆರ್' ಈ 2026ರ ಜೂನ್ ತಿಂಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Jul 14, 2026 - 15:22
Maruti WagonR: ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿಗೆ ಜೈ ಎಂದ ಜನ!

ಬೆಂಗಳೂರು: ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದುಕೊಂಡುಕೊಳ್ಳುತ್ತಿದ್ದಾರೆ. 

ಈ 2026ರ ಜೂನ್ ತಿಂಗಳು ಒಟ್ಟು 16,952 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 12930 ಯುನಿ‍‍ಟ್‍‍ಗಳನ್ನು ಮಾರಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡ 31.11% ಪ್ರಗತಿಯಾಗಿದೆ. 

ಇದು ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. 

ನೂತನ 'ಮಾರುತಿ ವ್ಯಾಗನ್ಆರ್' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು & 14-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ ಮತ್ತು ಪರ್ಲ್ ಮೆಟಾಲಿಕ್ ಗ್ಯಾಲಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 341 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 

ಇದು 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 23 ರಿಂದ 34 ಕಿ.ಮೀವರೆಗೆ ಮೈಲೇಜ್‌ನ್ನು ನೀಡುತ್ತದೆ.

ಹೊಸ 'ವ್ಯಾಗನ್ಆರ್' ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.