ಹಿತ್ತಲ ಗಿಡ ಮದ್ದು: ಸೋರೆಕಾಯಿ

Medicine Plant Gourd: ಹಿತ್ತಲ ಗಿಡವಾದ ಸೋರೆಕಾಯಿ ಪ್ರಮುಖ ಔಷಧೀಯ ತರಕಾರಿಯಾಗಿದ್ದು, ಆರೋಗ್ಯವನ್ನು ವೃದ್ಧಿಸುತ್ತದೆ.

Jul 31, 2026 - 11:28
ಹಿತ್ತಲ ಗಿಡ ಮದ್ದು: ಸೋರೆಕಾಯಿ

ಸೋರೆಕಾಯಿ (Gourd) ಆಯುರ್ವೇದದಲ್ಲಿ ಅತ್ಯಂತ ಮಹತ್ವದ ಔಷಧೀಯ ತರಕಾರಿ. ಇದು ಶೇಕಡ 96% ನೀರಿನಾಂಶ ಹೊಂದಿದ್ದು ದೇಹವನ್ನು ತಂಪಾಗಿಸುತ್ತದೆ. ಮಧುಮೇಹ ನಿಯಂತ್ರಿಸುತ್ತದೆ. ರಕ್ತದೊತ್ತಡ ಕಡಿಮೆಗೊಳಿಸುತ್ತದೆ. ಜೊತೆಗೆ ತೂಕ ಇಳಿಸಲು ನೆರವಾಗುತ್ತದೆ. 

ಇದರ ರಸವು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತದೆ. ಜೀರ್ಣಕ್ರಿಯೆ ಸುಧಾರಿಸಿ, ಮಲಬದ್ಧತೆಯನ್ನು ನಿವಾರಿಸುತ್ತದೆ. ಯಕೃತ್ ಹಾಗೂ ಮೂತ್ರಪಿಂಡದ ಶುದ್ಧೀಕರಣಕ್ಕೆ ಸಹಕಾರಿಯಾಗಿದೆ.

ಈ ಸೋರೆಕಾಯಿಯಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ ಮತ್ತು ನಾರಿನಂಶ ಅಧಿಕವಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿದ್ರಾಹೀನತೆ, ಮಾನಸಿಕ ಒತ್ತಡವನ್ನು ಕಡಿಮೆಗೊಳಿಸುತ್ತದೆ. ಚರ್ಮದ ಕಾಂತಿ ಹೆಚ್ಚಿಸುತ್ತದೆ. ಕೂದಲು ಉದುರುವಿಕೆಯನ್ನು ತಡೆಯುತ್ತದೆ. 

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋರೆಕಾಯಿ ರಸ ಸೇವನೆಯಿಂದ, ದೇಹದ ವಿಷಾಂಶ ಹೊರಹೋಗಿ ಆರೋಗ್ಯ ಸುಧಾರಿಸುತ್ತದೆ. ಇದನ್ನು ಅತಿಯಾಗಿ ಕಹಿಯಿದ್ದರೆ ಕುಡಿಯಬಾರದು ಎಂದು ವೈದ್ಯರು ಎಚ್ಚರಿಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕಾದರೆ, ಬಡವರಿಗೆ ಕಡಿಮೆ ಖರ್ಚಿನಲ್ಲಿ ಸಿಗುವ ಅಮೃತ ಸಮಾನ ಔಷಧವಾಗಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.