ಮಿಡ್‌ನೈಟ್‌ ಆಪರೇಷನ್‌ ಸಕ್ಸಸ್‌: ಕಾಂಗ್ರೆಸ್‌ಗೆ ಯೋಗೇಶ್ವರ್‌ ಸೇರ್ಪಡೆ

ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

Oct 23, 2024 - 10:26
Feb 5, 2026 - 18:51
ಮಿಡ್‌ನೈಟ್‌ ಆಪರೇಷನ್‌ ಸಕ್ಸಸ್‌: ಕಾಂಗ್ರೆಸ್‌ಗೆ ಯೋಗೇಶ್ವರ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು.


ಸಿಪಿ ಯೋಗೇಶ್ವರ್‌ ಅವರನ್ನು ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು.ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್‌ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿತ್ತು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.