ಬೆಂಗಳೂರಿನ ಎಂ.ಕೆ. ಪಾಂಡುರಂಗ ಶೆಟ್ಟಿ ಸ್ಮಾರಕ ಆರ್.ವಿ ಇನ್‌ಸ್ಟಿಟ್ಯೂಟ್‌ ಆಫ್‌ ಲೀಗಲ್‌ ಸ್ಟಡೀಸ್‌ನ ಪದವಿ ಪ್ರದಾನ ಸಮಾರಂಭ

ಗಣ್ಯರು ಒಟ್ಟು 110 ಕಾನೂನು ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ಹಾಗೂ ಸಾಧನಾ ಸ್ಮರಣಿಕೆಗಳನ್ನು ಪ್ರದಾನ ಮಾಡಿದರು. ಅಲ್ಲದೆ, ಶೈಕ್ಷಣಿಕ ಸಾಧನೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

Jul 4, 2026 - 20:26
ಬೆಂಗಳೂರಿನ ಎಂ.ಕೆ. ಪಾಂಡುರಂಗ ಶೆಟ್ಟಿ ಸ್ಮಾರಕ ಆರ್.ವಿ ಇನ್‌ಸ್ಟಿಟ್ಯೂಟ್‌ ಆಫ್‌ ಲೀಗಲ್‌ ಸ್ಟಡೀಸ್‌ನ  ಪದವಿ ಪ್ರದಾನ ಸಮಾರಂಭ
M.K. Panduranga Shetty Memorial R.V. Institute of Legal Studies holds its Convocation Ceremony in Bengaluru

ಬೆಂಗಳೂರು: ಜಯನಗರದಲ್ಲಿರುವ ಎಂ.ಕೆ. ಪಾಂಡುರಂಗ ಶೆಟ್ಟಿ ಸ್ಮಾರಕ ಆರ್.ವಿ. ಇನ್‌ಸ್ಟಿಟ್ಯೂಟ್‌ ಆಫ್‌ ಲೀಗಲ್‌ ಸ್ಟಡೀಸ್‌(leagal studies), ಜಯನಗರ, ಬೆಂಗಳೂರು ಇದರ 2021–26ನೇ ಬ್ಯಾಚ್‌ನ ನಾಲ್ಕನೇ ಪದವಿ ಪ್ರದಾನ (convocation) ಸಮಾರಂಭವು ಜು.4ರ ಶನಿವಾರದಂದು ಮಂಗಳ ಮಂಟಪದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ(high court) ವಿಭು ಬಖ್ರು ಅವರು ಭಾಗವಹಿಸಿದ್ದರು. ಕ್ಯಾಂಪಸ್‌ಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಗೌರವ ವಂದನೆ(Guard of Honour) ಸಲ್ಲಿಸಲಾಯಿತು.
ವಕೀಲ ವೃತ್ತಿಗೆ ಪ್ರವೇಶ ಪಡೆಯಲಿರುವ ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿಗಳು, ಕಾನೂನು ವೃತ್ತಿಯನ್ನು ಸಮರ್ಪಣೆ, ಪ್ರಾಮಾಣಿಕತೆ ಹಾಗೂ ಗಂಭೀರತೆಯಿಂದ ಸ್ವೀಕರಿಸುವಂತೆ ಕರೆ ನೀಡಿದರು. ಕಾನೂನು ಕ್ಷೇತ್ರವು ವೈಯಕ್ತಿಕ ಬೆಳವಣಿಗೆಯ ಜೊತೆಗೆ ಸಮಾಜಸೇವೆಗೆ ಅಪಾರ ಅವಕಾಶಗಳನ್ನು ಒದಗಿಸುವ ಮಹತ್ವದ ವೃತ್ತಿಯಾಗಿದೆ ಎಂದು ಅವರು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್‌ಎಸ್‌ಎಸ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಪಿ. ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಚಂದ್ರಶೇಖರ ರಾಜು, ಆಡಳಿತ ಮಂಡಳಿ ಅಧ್ಯಕ್ಷರಾದ ಎನ್. ಆರ್. ನಂದೀಶ್, ಆಡಳಿತ ಮಂಡಳಿ ಸದಸ್ಯರಾದ ಸಿಎ ಡಾ.ವಿಷ್ಣು ಭರತ್ ಆಲಂಪಳ್ಳಿ ಹಾಗೂ ಟ್ರಸ್ಟಿ ಡಾ. ಎಂ. ಎಸ್. ಪ್ರಕಾಶ್ ಉಪಸ್ಥಿತರಿದ್ದರು.
ಗಣ್ಯರು ಒಟ್ಟು 110 ಕಾನೂನು ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ಹಾಗೂ ಸಾಧನಾ ಸ್ಮರಣಿಕೆಗಳನ್ನು ಪ್ರದಾನ ಮಾಡಿದರು. ಅಲ್ಲದೆ, ಶೈಕ್ಷಣಿಕ ಸಾಧನೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.
ಈ ಸಮಾರಂಭದಲ್ಲಿ ಬೋಧಕ ವೃಂದ, ಸಿಬ್ಬಂದಿ, ಪೋಷಕರು ಹಾಗೂ ಹಿತೈಷಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಸಭಾಂಗಣವು ಸಂಪೂರ್ಣವಾಗಿ ಭರ್ತಿಯಾಗಿದ್ದು, ಪದವೀಧರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳ ಸಂತೋಷ ಮತ್ತು ಹೆಮ್ಮೆಯನ್ನು ಪ್ರತಿಬಿಂಬಿಸಿತು.


ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಅಂಜಿನಾ ರೆಡ್ಡಿ ಕೆ. ಆರ್. ಅವರು ಎಲ್ಲಾ ಪದವೀಧರರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಕಾನೂನು ವೃತ್ತಿಜೀವನವು ಉಜ್ವಲ, ಯಶಸ್ವಿ ಹಾಗೂ ಸಮಾಜಮುಖಿಯಾಗಿರಲೆಂದು ಶುಭ ಹಾರೈಸಿದರು.