ಮೂಡುಬಿದಿರೆ: ಜನವರಿಯಲ್ಲಿ ಆಳ್ವಾಸ್ ನುಡಿಸಿರಿ-ವಿರಾಸತ್ ಉತ್ಸವ

Alva's Nudisiri And Virasat Festival: 'ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ' ಆಯೋಜಿಸುವ ರಾಷ್ಟ್ರಮಟ್ಟದ ಆಳ್ವಾಸ್ ನುಡಿಸಿರಿ-ವಿರಾಸತ್ ಉತ್ಸವಗಳನ್ನು 2027ರ ಜನವರಿಯಲ್ಲಿ ಒಟ್ಟಿಗೆ ನಡೆಸಲು ತೀರ್ಮಾನಿಸಲಾಗಿದೆ.

Jul 27, 2026 - 13:04
Jul 27, 2026 - 14:12
ಮೂಡುಬಿದಿರೆ: ಜನವರಿಯಲ್ಲಿ ಆಳ್ವಾಸ್ ನುಡಿಸಿರಿ-ವಿರಾಸತ್ ಉತ್ಸವ

ಮೂಡುಬಿದಿರೆ: ಇಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಭ್ರಮಕ್ಕೆ ಮತ್ತೆ ವೇದಿಕೆ ಸಿದ್ಧಗೊಳ್ಳುತ್ತಿದೆ. 'ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ' ಆಯೋಜಿಸುವ ರಾಷ್ಟ್ರಮಟ್ಟದ ಆಳ್ವಾಸ್ ನುಡಿಸಿರಿ & ವಿರಾಸತ್ ಉತ್ಸವಗಳನ್ನು 2027ರ ಜನವರಿಯಲ್ಲಿ ಒಟ್ಟಿಗೆ ನಡೆಸಲು ತೀರ್ಮಾನಿಸಲಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರ ನಿವಾಸದಲ್ಲಿ ಜರುಗಿದ ಪ್ರಥಮ ಸಮಾಲೋಚನಾ ಸಭೆಯಲ್ಲಿ, ಈ ಬಾರಿ ಎರಡು ಕಾರ್ಯಕ್ರಮಗಳನ್ನು ಒಟ್ಟಿಗೆ ಅದ್ಧೂರಿಯಾಗಿ ಜರಿಗಿಸಲು ನಿರ್ಧರಿಸಲಾಗಿದೆ.

ಆ ನಂತರ ಅವರು ಮಾತನಾಡಿದರು. 'ಪ್ರತಿವರ್ಷವು ವಿನೂತನ ಆಲೋಚನೆ, ನವೀನ ಪರಿಕಲ್ಪನೆ ಹಾಗೂ ಹೊಸ ತಲೆಮಾರಿನ ಭಾಗವಹಿಸುವಿಕೆಗೆ ಆದ್ಯತೆ ನೀಡುತ್ತಾ ಉತ್ಸವವನ್ನು ವಿಸ್ತರಿಸುತ್ತಿದ್ದೇವೆ. ಜನವರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸಲಾಗುವುದು. ಜೊತೆಗೆ ಯುವಜನತೆ, ಕನ್ನಡದ ಭವಿಷ್ಯ, ದೇಶೀಯತೆ, ಪರಿಸರ ಸಂರಕ್ಷಣೆ, ಸಹಬಾಳ್ವೆಯಂತಹ ಸಮಕಾಲೀನ ಹಾಗೂ ಗಂಭೀರ ವಿಷಯಗಳ ಕುರಿತು ಚರ್ಚೆಗೆ ವೇದಿಕೆ ಕಲ್ಪಿಸಲಾಗುವುದು' ಎಂದು ಹೇಳಿದರು.

ಸಾಮಾನ್ಯವಾಗಿ ಪ್ರತ್ಯೇಕವಾಗಿ ನಡೆಯುತ್ತಿದ್ದ ನುಡಿಸಿರಿ & ವಿರಾಸತ್ ಈ ಬಾರಿ ಒಂದೇ ಸೂರಿನಡಿ ನಡೆಯುತ್ತಿದೆ. ಇದು ಸಹಸ್ರಾರು ಸಾಹಿತ್ಯಾಸಕ್ತರು, ಕಲಾವಿದರು ಮತ್ತು ವಿದ್ಯಾರ್ಥಿಗಳಿಗೆ ಹಬ್ಬದೂಟವಾಗಲಿದೆ. ಕನ್ನಡ ಸಾಹಿತ್ಯ, ರಾಷ್ಟ್ರೀಯ ಸಂಸ್ಕೃತಿ, ಜಾನಪದ ಕಲೆ, ಸಂಗೀತ, ನೃತ್ಯಗಳ ಸಮ್ಮಿಲನಕ್ಕೆ ಈ ಉತ್ಸವ ಸಾಕ್ಷಿಯಾಗಲಿದೆ. ದೇಶದ ಮೂಲೆ ಮೂಲೆಗಳಿಂದ ಖ್ಯಾತ ಸಾಹಿತಿಗಳು, ಚಿಂತಕರು ಹಾಗೂ ಕಲಾವಿದರು ಭಾಗವಹಿಸಲಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.