ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ: ಸಂಸದ ಕ್ಯಾ. ಚೌಟ ದಿಗ್ಭ್ರಮೆ, ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

BC Road: ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುತ್ತದೆ. ಯುವಜನತೆ ಇಂತಹ ಹಿಂಸಾತ್ಮಕ ಹಾಗೂ ಕಾನೂನುಬಾಹಿರ ಕೃತ್ಯಗಳತ್ತ ಮುಖ ಮಾಡುತ್ತಿರುವುದು ತೀವ್ರ ಆತಂಕಕಾರಿ ಹಾಗೂ ನೋವಿನ ಸಂಗತಿಯಾಗಿದೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ವ್ಯಕ್ತಪಡಿಸಿದರು.

Jul 16, 2026 - 23:31
Jul 17, 2026 - 10:41
ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ: ಸಂಸದ ಕ್ಯಾ. ಚೌಟ ದಿಗ್ಭ್ರಮೆ, ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ ಇಂತಹ ಹಿಂಸಾತ್ಮಕ ಹಾಗೂ ಕಾನೂನುಬಾಹಿರ ಕೃತ್ಯಗಳತ್ತ ಮುಖ ಮಾಡುತ್ತಿರುವುದು ತೀವ್ರ ಆತಂಕಕಾರಿ ಹಾಗೂ ನೋವಿನ ಸಂಗತಿಯಾಗಿದೆ. ಸಮಾಜದಲ್ಲಿ ಯಾರ ಭಯವೂ ಇಲ್ಲದೆ ಕಾನೂನು ಕೈಗೆತ್ತಿಕೊಂಡು ಅಟ್ಟಹಾಸ ಮೆರೆಯುವಂಥ ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು. ಯುವಕರು ಅಡ್ಡದಾರಿ ಹಿಡಿದು ಅಪರಾಧ ಕೃತ್ಯ ಎಸಗುವ ಈ ರೀತಿಯ ಘಟನೆಗಳು ಮರುಕಳಿಸುತ್ತಿರುವುದು ಸಮಾಜಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ಸರ್ಕಾರ ಹಾಗೂ ಪೊಲೀಸ್‌ ಇಲಾಖೆಯು ಈ ನಿಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣವನ್ನು ದಕ್ಷಿಣ ಕನ್ನಡ ಪೊಲೀಸ್‌ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಆದಷ್ಟು ಬೇಗ ಬಂಧಿಸಬೇಕು. ಅಲ್ಲದೆ, ಆತನಿಗೆ ಅತ್ಯಂತ ಕಠಿಣ ಹಾಗೂ ತ್ವರಿತವಾಗಿ ಶಿಕ್ಷೆಯಾಗುವಂತೆಯೂ ನೋಡಿಕೊಳ್ಳಬೇಕು. "ಮಗಳನ್ನು ಕಳೆದುಕೊಂಡ ಮೃತ ಲಾವಣ್ಯ ಅವರ ಕುಟುಂಬಕ್ಕೆ ಈ ಆಘಾತವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ," ಎಂದು ಸಂಸದರು ವಿಷಾದ ವ್ಯಕ್ತಪಡಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.