ನ.23ಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

Brijesh Chowta: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು, ನ.23 ಸೋಮವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರಲಿದ್ದಾರೆ.

Nov 21, 2026 - 14:26
Nov 21, 2026 - 14:26
ನ.23ಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು, ನ.23 ಸೋಮವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರಲಿದ್ದಾರೆ. 
 
ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ12 ಗಂಟೆಯವರೆಗೆ ಅವರು, ಜನಸಾಮಾನ್ಯರ ಕುಂದುಕೊರತೆಗಳನ್ನು ಆಲಿಸಲಿದ್ದು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
 
ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು, ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. 
 
ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ ಗಮನಕ್ಕೆ ತರಬಹುದು ಎಂದು ಕ್ಯಾ.ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.