ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Brijesh Chowta: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಆಪ್ತ ಕಾರ್ಯದರ್ಶಿ ಡೆನ್ಜಿಲ್ ಅವರ ಆರೋಗ್ಯವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂದು ವಿಚಾರಿಸಿದ್ದಾರೆ.

Sep 21, 2026 - 13:28
Sep 21, 2026 - 13:29
ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಆಪ್ತ ಕಾರ್ಯದರ್ಶಿ ಡೆನ್ಜಿಲ್ ಅವರ ಆರೋಗ್ಯವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂದು ವಿಚಾರಿಸಿದ್ದಾರೆ. ವೈದ್ಯರೊಂದಿಗೆ ಚರ್ಚಿಸಿ, ಆರೋಗ್ಯದ ಕುರಿತು ಮಾಹಿತಿಯನ್ನು ಪಡೆದಿದ್ದು, ಇಬ್ಬರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಸದ್ಯ ರಮಾನಾಥ ರೈ ಯೆನೆಪೋಯ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ, ಕಾರ್ಕಳ ಸಮೀಪ ಸಾಣೂರಿನಲ್ಲಿ ಭಾನುವಾರ ಮಧ್ಯಾಹ್ನ ಖಾಸಗಿ ಬಸ್‌ ಡಿಕ್ಕಿಯಾಗಿತ್ತು. ಕಾರು ಕೂಡ ಜಖಂಗೊಂಡಿತ್ತು.

  

ಮೂಡುಬಿದ್ರೆಯಿಂದ ಕಾರ್ಕಳ ತಾಲೂಕಿನ ಬಜಗೋಳಿಗೆ ಕಾರ್ಯಕ್ರಮ ನಿಮಿತ್ತ ರಮಾನಾಥ ರೈ ತೆರಳುತ್ತಿದ್ದಾಗ, ಈ ಘಟನೆ ಸಂಭವಿಸಿತ್ತು. ಇನ್ನು, ಬಸ್‌ನಲ್ಲಿದ್ಧ 6 ಮಂದಿ ಪ್ರಯಾಣಿಕರಿಗೂ ಗಾಯಗಳಾಗಿದ್ದವು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.