ವಿಧಾನ ಪರಿಷತ್ ಚುನಾವಣೆ: ಎನ್ಡಿಎ ಅಭ್ಯರ್ಥಿ ಪರ ಸಂಸದ ಡಾ.ಕೆ.ಸುಧಾಕರ್ ಮತಯಾಚನೆ
Dr.K.Sudhakar: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ, ಎನ್ಡಿಎ ಅಭ್ಯರ್ಥಿ ಪರ ಸಂಸದ ಡಾ.ಕೆ.ಸುಧಾಕರ್ ಮತಯಾಚನೆ ಮಾಡಿದರು.
ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್ಡಿಎ) ಅಭ್ಯರ್ಥಿ ಕೆ.ಎಂ.ಸುರೇಶ್ ಪರವಾಗಿ ಸಂಸದ ಡಾ.ಕೆ.ಸುಧಾಕರ್ (Dr.K.Sudhakar) ಮತಯಾಚನೆ ಮಾಡಿದರು.
ಸಿವಿವಿ ಕ್ಯಾಂಪಸ್ನಲ್ಲಿ ಪದವೀಧರ ಮತದಾರರನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಿ ಎನ್ಡಿಎ ಅಭ್ಯರ್ಥಿಯ ಗೆಲುವಿಗೆ ಬೆಂಬಲ ನೀಡುವಂತೆ ಕೋರಿದರು.
ಈ ವೇಳೆ ಸಿವಿವಿ ವಿದ್ಯಾಸಂಸ್ಥೆಯ ಟ್ರಸ್ಟಿ ಹಾಗೂ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಉಪಸ್ಥಿತರಿದ್ದರು.