ಸಂಸದ ಕ್ಯಾ. ಚೌಟ ಅ. 30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ

Oct 29, 2025 - 15:48
ಸಂಸದ ಕ್ಯಾ. ಚೌಟ ಅ. 30 ರಂದು ಸಾರ್ವಜನಿಕರ ಭೇಟಿಗೆ ಲಭ್ಯ
ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
 
ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.