ಮಂಗಳೂರಿನಲ್ಲಿ ಆದಷ್ಟು ಬೇಗ ಹೈಕೋರ್ಟ್‌ ಪೀಠ ಸ್ಥಾಪನೆಗೆ ಸಂಸದ ಕ್ಯಾ. ಚೌಟ ಒತ್ತಾಯ.

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿ ಈ ಭಾಗದಿಂದ ಹೈಕೋರ್ಟ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಜ್ಯಗಳು ಸಲ್ಲಿಕೆಯಾಗುತ್ತಿದೆ.

Oct 8, 2024 - 08:52

ಮಂಗಳೂರು ; ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿ ಈ ಭಾಗದಿಂದ ಹೈಕೋರ್ಟ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಜ್ಯಗಳು ಸಲ್ಲಿಕೆಯಾಗುತ್ತಿದೆ. ಆದರೆ ಈ ಜಿಲ್ಲೆಗಳ ಜನರಿಗೆ ನ್ಯಾಯಕ್ಕಾಗಿ ದೂರದ ಬೆಂಗಳೂರಿನಲ್ಲಿರುವ ಹೈಕೋರ್ಟ್‌ಗೆ ಮೊರೆ ಹೋಗುವುದು ನಾನಾ ರೀತಿ ಅನಾನುಕೂಲವುಂಟು ಮಾಡುವ ಜತೆಗೆ ಆರ್ಥಿಕವಾಗಿಯೂ ಹೆಚ್ಚು ಹೊರೆಯಾಗುತ್ತಿದೆ.

 ಈ ಹಿನ್ನಲೆಯಲ್ಲಿ ಮಂಗಳೂರನ್ನು ಕೇಂದ್ರೀಕರಿಸಿಕೊಂಡು ಹೈಕೋರ್ಟ್‌ ಪೀಠ ಸ್ಥಾಪಿಸಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿದ್ದು, ಅದನ್ನು ಆದಷ್ಟು ಬೇಗ ಆದ್ಯತೆ ಮೇರೆಗೆ ಕಾರ್ಯರೂಪಕ್ಕೆ ತರಬೇಕು.
ಹೀಗಾಗಿ, ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಾನು ನಮ್ಮ ಕೇಂದ್ರ ಕಾನೂನು ಸಚಿವರಾದ ಶ್ರೀ  ಅರ್ಜುನ್ ರಾಮ್ ಮೇಘವಾಲ್ ಮತ್ತು ಕರ್ನಾಟಕದ ಸಿಎಂ ಶ್ರೀ ಸಿದ್ದರಾಮಯ್ಯ, ಕರ್ನಾಟಕ ಕಾನೂನು ಸಚಿವ ಶ್ರೀ ಎಚ್.ಕೆ. ಪಾಟೀಲ ಮತ್ತು ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಲ್ಲಿ ಈ ಭಾಗದ ಜನರ ಪರವಾಗಿ ಮನವಿ ಮಾಡುತ್ತಿದ್ದೇನೆ

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.