MRPL ದುರಂತ: ಓರ್ವ ಸಾವು, 9 ಮಂದಿಗೆ ಗಾಯ.. ಘಟನಾ ಸ್ಥಳಕ್ಕೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಭೇಟಿ

MRPL: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. 9 ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಭೇಟಿ ನೀಡಿದ್ದಾರೆ.

Sep 30, 2026 - 20:17
Sep 30, 2026 - 20:18
MRPL ದುರಂತ: ಓರ್ವ ಸಾವು, 9 ಮಂದಿಗೆ ಗಾಯ.. ಘಟನಾ ಸ್ಥಳಕ್ಕೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಭೇಟಿ

ದಕ್ಷಿಣ ಕನ್ನಡ: 'ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್'ನ (MRPL) 3ನೇ ಹಂತದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ   ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ಅವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಮೃತನನ್ನು ಮುಲ್ಕಿ ಮೂಲದ 30 ವರ್ಷದ ಮನೀಶ್ ಕರ್ಕೇರ ಎಂದು ಗುರುತಿಸಲಾಗಿದೆ. ಆತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಎಂಬ ವಿವರಗಳು ಲಭ್ಯವಾಗಿವೆ. 
 
ಸಂಸದರ ಭೇಟಿ:   
 
ಈ ದುರಂತ ಸಂಭವಿಸಿದ ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿದ್ದ ಸಂಸದ ಕ್ಯಾ.ಬ್ರಿಜೇಶ್‌ ಚೌಟ  ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಧಿಕಾರಿಗಳ ಜೊತೆಗೆ ಮಾತನಾಡಿ, ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. 
 
2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೂ ಹಾನಿ: 
 
ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಿಲೋಮೀಟರ್‌ಗಳವರೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಎಂಆರ್‌ಪಿಎಲ್‌ನಿಂದ 2 ಕಿಲೋಮೀಟರ್ ದೂರದಲ್ಲಿರುವ ಚರ್ಚ್​​​ಗೂ ಹಾನಿಯಾಗಿದ್ದು, ಮೇಲ್ಚಾವಣಿಯಲ್ಲಿನ ಹಂಚುಗಳು ಹಾಗೂ ಚರ್ಚ್ ಕಿಟಕಿ ಬಾಗಿಲು ಪುಡಿಪುಡಿಯಾಗಿವೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.