MRPL ದುರಂತ: ಮೃತ ಮನೀಶ್ ಕಕ್ಕಿಡ ಕುಟುಂಬಕ್ಕೆ ಭವಿಷ್ಯ ನಿಧಿ ಸೌಲಭ್ಯ ವಿತರಣೆ

MRPL: ಈಚೆಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ಮನೀಶ್ ಕಕ್ಕಿಡ ಕುಟುಂಬಕ್ಕೆ ಭವಿಷ್ಯ ನಿಧಿ ಸೌಲಭ್ಯವನ್ನು ವಿತರಿಸಲಾಗಿದೆ.

Oct 9, 2026 - 20:00
Oct 9, 2026 - 20:00
MRPL ದುರಂತ: ಮೃತ ಮನೀಶ್ ಕಕ್ಕಿಡ ಕುಟುಂಬಕ್ಕೆ ಭವಿಷ್ಯ ನಿಧಿ ಸೌಲಭ್ಯ ವಿತರಣೆ

ಮಂಗಳೂರು: ಇಲ್ಲಿನ 'ಇಪಿಎಫ್ಒ' ಪ್ರಾದೇಶಿಕ ಕಚೇರಿಯು, ಈಚೆಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ಮನೀಶ್ ಕಕ್ಕಿಡ ಕುಟುಂಬಕ್ಕೆ ಭವಿಷ್ಯ ನಿಧಿ ಸೌಲಭ್ಯವನ್ನು ವಿತರಿಸಿದೆ.

ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಸಂದೀಪ್ ಬಿಸ್ವಾಸ್, ಸಹಾಯಕ ಭವಿಷ್ಯ ನಿಧಿ ಆಯುಕ್ತ ಅಂಕಿತ್ ಸಿಂಗ್ ಹಾಗೂ ಪಾವತಿ ಅಧಿಕಾರಿ ಅನಿತಾ ಆರ್ ಅವರು, ಮನೀಶ್ ಕಕ್ಕಿಡ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು ಹಸ್ತಾಂತರಿಸಿದ್ದಾರೆ.

'ಇಪಿಎಫ್ಒ' ಸಂಸ್ಥೆಯು ಮೃತ ವ್ಯಕ್ತಿಯ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದೆ. ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.