Mysuru Dasara: ಚಾಮುಂಡೇಶ್ವರಿ ತಾಯಿಗೆ ಸಿಎಂ ಡಿ.ಕೆ.ಶಿವಕುಮಾರ್ ಪುಷ್ಪಾರ್ಚನೆ

Mysuru Dasara: ವಿಶ್ವವಿಖ್ಯಾತ ಜಂಬೂ ಸವಾರಿ ಹಿನ್ನೆಲೆ, ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಪುಷ್ಪಾರ್ಚನೆ ಮಾಡಿದರು.

Oct 21, 2026 - 18:58
Mysuru Dasara: ಚಾಮುಂಡೇಶ್ವರಿ ತಾಯಿಗೆ ಸಿಎಂ ಡಿ.ಕೆ.ಶಿವಕುಮಾರ್ ಪುಷ್ಪಾರ್ಚನೆ

ಮೈಸೂರು: ವಿಶ್ವವಿಖ್ಯಾತ ಜಂಬೂ ಸವಾರಿ ಹಿನ್ನೆಲೆ, ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಪುಷ್ಪಾರ್ಚನೆ ಮಾಡಿದರು. ಈ ಬಗ್ಗೆ 'ಎಕ್ಸ್'ನಲ್ಲಿಯೂ ಪೋಸ್ಟ್ ಮಾಡಿದ್ದಾರೆ.

'ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ ಆವರಣದಲ್ಲಿ ಶುಭ ಮೀನ ಲಗ್ನದಲ್ಲಿ ಚಾಲನೆ ನೀಡಿ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಭಕ್ತಿಪೂರ್ವಕವಾಗಿ ಪುಷ್ಪಾರ್ಚನೆ ಸಲ್ಲಿಸಿದೆ. ಚಾಮುಂಡೇಶ್ವರಿಯ ದಿವ್ಯ ಆಶೀರ್ವಾದದೊಂದಿಗೆ ಜಂಬೂ ಸವಾರಿಯ ಈ ಪವಿತ್ರ ಮೆರವಣಿಗೆ ನಾಡಿನ ಸುಖ, ಶಾಂತಿ, ಸಮೃದ್ಧಿಗೆ ಮುನ್ನುಡಿಯಾಗಲಿ ಎಂದು ಪ್ರಾರ್ಥಿಸಿದೆ' ಎಂದು ಹೇಳಿದ್ದಾರೆ.

'ಗಜರಾಜ ಪ್ರಶಾಂತನ ಬೆನ್ನ ಮೇಲೆ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿಯ ದಿವ್ಯ ದರ್ಶನವೇ ಕಣ್ಣಿಗೆ ಪರಮಾನಂದ. ವಿಜಯದಶಮಿಯ ಈ ಪುಣ್ಯ ಸಂದರ್ಭದಲ್ಲಿ, ನಮ್ಮ ಭವ್ಯ ಇತಿಹಾಸ ಮತ್ತು ನಾಡಿನ ವೈವಿಧ್ಯಮಯ ಪರಂಪರೆಯನ್ನು ಕಣ್ಮುಂದೆ ತಂದಿರಿಸಿದ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದು ನನ್ನ ಪಾಲಿನ ಸೌಭಾಗ್ಯ' ಎಂದು ಹೇಳಿದ್ದಾರೆ.

ಪುಷ್ಪಾರ್ಚನೆ ವೇಳೆ, ಮೈಸೂರು ರಾಜವಂಶದ ಪ್ರತಿನಿಧಿ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ವಿಶೇಷ ಅತಿಥಿಗಳಾದ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ, ಕೇರಳಂ ಮುಖ್ಯಮಂತ್ರಿ ವಿ.ಡಿ.ಸತೀಶನ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.