ಮೈಸೂರು ದಸರಾ: ಪುತ್ತೂರಿನ ವೈಷ್ಣವಿ ನಾಟ್ಯಾಲಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ

Mysuru Dasara: ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಅಂಗವಾಗಿ, ಪುತ್ತೂರಿನ ವೈಷ್ಣವಿ ನಾಟ್ಯಾಲಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು.

Oct 16, 2026 - 19:40
Oct 16, 2026 - 19:40
ಮೈಸೂರು ದಸರಾ: ಪುತ್ತೂರಿನ ವೈಷ್ಣವಿ ನಾಟ್ಯಾಲಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ

ಮೈಸೂರು: ಇಲ್ಲಿನ ರಮಾ ಗೋವಿಂದ ರಂಗಮಂದಿರದಲ್ಲಿ ವಿಶ್ವವಿಖ್ಯಾತ ದಸರಾ' ಅಂಗವಾಗಿ, ಪುತ್ತೂರಿನ ವೈಷ್ಣವಿ ನಾಟ್ಯಾಲಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು. 

ಈ ಸಂಸ್ಥೆಯ ವಿದ್ಯಾರ್ಥಿನಿಯರಾದ ಹರ್ಷಿತ ಬದಿಯಡ್ಕ, ಅಭಿಜ್ಞಾ ಕೊಳ್ತಿಗೆ, ಭಾರ್ಗವಿ ಬಾಯಾರು, ಪ್ರತೀಕ ರೈ ಕುಂಬ್ದಾಜೆ, ವೈಷ್ಣವಿ ಬದಿಯಡ್ಕ ಮತ್ತು ಡಾ.ಅರ್ಪಿತಾ ಮುಳ್ಳೆರಿಯ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪುಷ್ಪಾಂಜಲಿ ಹಾಗೂ ಗಣೇಶ ಸ್ತುತಿಯೊಂದಿಗೆ ಆರಂಭಗೊಂಡು ಶಿವಸ್ತುತಿ, ದೇವಿ ಸ್ತುತಿ ತುಳುನಾಡಿನ ವರ್ಣನೆ ಇರುವ ನೃತ್ಯ ಮತ್ತು ತಿಲ್ಲಾನದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. 

ನಾಟ್ಯಾಲಯದ ನಿರ್ದೇಶಕಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.