ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ: ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ.. ಮೀನ ಲಗ್ನದಲ್ಲಿ ಮೆರವಣಿಗೆಗೆ ಚಾಲನೆ

Mysuru Dasara: ಮೈಸೂರು ದಸರಾ ಮಹೋತ್ಸವದ ಅಂತಿಮ ಸಂಭ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ ವಿಶ್ವವಿಖ್ಯಾತ ಜಂಬೂಸವಾರಿ ನಡೆಯಲಿದೆ.

Oct 20, 2026 - 10:05
Oct 20, 2026 - 10:06
ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ: ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ..  ಮೀನ ಲಗ್ನದಲ್ಲಿ ಮೆರವಣಿಗೆಗೆ ಚಾಲನೆ

ಮೈಸೂರು: ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಗತ್ತಿಗೆ ಸಾರಿದ ಮೈಸೂರು ದಸರಾ ಮಹೋತ್ಸವದ ಅಂತಿಮ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. 

10 ದಿನಗಳ ಕಾಲ ಸಾಂಸ್ಕೃತಿಕ ನಗರಿಯನ್ನು ಸಂಭ್ರಮದ ಸಾಗರದಲ್ಲಿ ಮುಳುಗಿಸಿದ ನಾಡಹಬ್ಬ, ಅ.21ರ ಬುಧವಾರ ವಿಜಯದಶಮಿಯಂದು ನಡೆಯುವ ಐತಿಹಾಸಿಕ ಜಂಬೂಸವಾರಿ ಹಾಗೂ ಬನ್ನಿಮಂಟಪದ ಪಂಜಿನ ಕವಾಯತಿನೊಂದಿಗೆ ತನ್ನ ವೈಭವದ ಪರಾಕಾಷ್ಠೆ ತಲುಪಲಿದೆ.

ಶುಭ ಲಗ್ನದಲ್ಲಿ ಚಾಲನೆ:

ಬುಧವಾರ ಮಧ್ಯಾಹ್ನ 1.36 ರಿಂದ 1.56 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜ ಪೂಜೆ ನೆರವೇರಲಿದೆ. ಆ ಬಳಿಕ ಸಂಜೆ 4.10 ರಿಂದ 4.35 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ, ಅರಮನೆಯ ಆವರಣದಲ್ಲಿ ವಿಜಯದಶಮಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ರಾಜವಂಶದ ಪ್ರತಿನಿಧಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ವೈಭವದ ಮೆರವಣಿಗೆ: 

ರಾಜಪರಂಪರೆಯ ಗಾಂಭೀರ್ಯ, ಧಾರ್ಮಿಕ ಅಧಿವಿಧಾನಗಳ ಪಾವಿತ್ರ್ಯ ಹಾಗೂ ಜನಪದ ಕಲೆಗಳ ಸೊಗಡು ಈ ಮೆರವಣಿಗೆಯಲ್ಲಿ ಮೇಳೈಸಲಿದೆ. ಸಾಂಪ್ರದಾಯಿಕ ನಾದ, ಸ್ತಬ್ಧಚಿತ್ರಗಳು, ಕಲಾತಂಡಗಳು ಹಾಗೂ ಅಲಂಕೃತ ಆನೆಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿವೆ. 

ಪಂಜಿನ ಕವಾಯತು:

ವಿಜಯದಶಮಿಯ ಸಂಭ್ರಮಕ್ಕೆ ಮತ್ತೊಂದು ಆಕರ್ಷಣೆ ನೀಡುವುದು ಬನ್ನಿಮಂಟಪದ ಪಂಜಿನ ಕವಾಯತು. ರಾತ್ರಿ 7 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.