ದಕ್ಷಿಣ ಕನ್ನಡ: ಗಾಯಳುಗಳ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Nagori Tragedy: MP Brijesh Chowta Visit Hospital, Inquired Health Injured: ನಾಗೋರಿಯಲ್ಲಿ ಭೀಕರ ಕಾಂಪೌಂಡ್ ಗೋಡೆ ಕುಸಿತ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿದರು.

Jul 2, 2026 - 10:14
Jul 2, 2026 - 18:03
ದಕ್ಷಿಣ ಕನ್ನಡ: ಗಾಯಳುಗಳ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ: ಇಲ್ಲಿನ ನಾಗೋರಿಯಲ್ಲಿ ಭೀಕರ ಕಾಂಪೌಂಡ್ ಗೋಡೆ ಕುಸಿತ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ, ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ವೇಳೆ ಸಂಸದರು ಮಾತನಾಡಿ, ನಾಗೋರಿ ಬಳಿ ನಡೆದ ಈ ದುರಂತ ಅತ್ಯಂತ ದುರದೃಷ್ಟಕರ ಮತ್ತು ಮನನೋಯಿಸುವಂಥದ್ದಾಗಿದೆ. ಈ ಘಟನೆಯಲ್ಲಿ ಮೂವರು ಜೀವ ಕಳೆದುಕೊಂಡಿರುವುದು ತೀವ್ರ ಬೇಸರ ತಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ ದೈರ್ಯ ತುಂಬಲಾಗಿದೆ. ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ನೆರವು ಹಾಗೂ ಜಿಲ್ಲಾಡಳಿತದ ವತಿಯಿಂದ ಸಿಗಬೇಕಾದ ಗರಿಷ್ಠ ಪರಿಹಾರವನ್ನು ಶೀಘ್ರವಾಗಿ ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಈ ದುರಂತದಿಂದಾಗಿ, ಆ ಕುಟುಂಬಕ್ಕೆ ಆಸರೆಯೇ ಇಲ್ಲದಂತಾಗಿದೆ. ಹೀಗಾಗಿ, ತಕ್ಷಣವೇ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪುನರ್ವಸತಿ ವ್ಯವಸ್ಥೆಯನ್ನು ಒದಗಿಸಬೇಕು ಎಂದು ಸಂಸದರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.