ನಾರಾಯಣ ಗುರು ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

Narayana Guru Development Corporation: 2026-27ನೇ ಸಾಲಿನ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಡಿಯಲ್ಲಿ 4(A) ಯಿಂದ 4(Z) ವರೆಗೂ ಬರುವ ಸಮುದಾಯಗಳ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Nov 23, 2026 - 19:40
Nov 23, 2026 - 19:41
ನಾರಾಯಣ ಗುರು ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಸಾಲಿನ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಡಿಯಲ್ಲಿ 4(A) ಯಿಂದ 4(Z) ವರೆಗೂ ಬರುವ ಈಡಿಗ, ಬಂಧಾರಿ, ಬೆಲ್ಲದ್, ಬಿಲ್ಲವ, ಪೂಜಾರಿ, ದೀವರ, ಹಾಲ ಕ್ಷತ್ರಿಯ, ದೇಶ ಭಂಡಾರಿ, ದೇವರ, ದೇವರ ಮಕ್ಕಳು/ ದೀವರ ಮಕ್ಕಳು, ಈಡಿಗ, ಎಳಿಗ, ಎಳವ, ಗಾಮಲ್ಲ, ಗೌಂಡ, ಹಳೇ ಪೈಕು, ಇಲ್ಲಾವನ್, ಕಲಾಲ್, ಮಲಯಾಳಿ ಬಿಲ್ಲವ, ನಾಡರ್, ನಾಮಧಾರಿ, ಥಿಯಾನ್, ಥಿಯ್ಯ, ಇಳಿಗ, ಗೊಂಡ್ಲ ಮತ್ತು ತಿಯನ್/ಥಯ್ಯಾನ್ ಸಮುದಾಯಗಳ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

* ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: 

ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ರೂ.1 ಲಕ್ಷಗಳವರೆಗಿನ ಸಾಲದಲ್ಲಿ ಶೇ.20 ರಷ್ಟು ಗರಿಷ್ಠ ರೂ.20 ಸಾವಿರ ಸಹಾಯಧನ ಹಾಗೂ ರೂ.1 ಲಕ್ಷದಿಂದ ರೂ.2 ಲಕ್ಷದವರೆಗೆ ಶೇ.15 ರಷ್ಟು ಕನಿಷ್ಠ ರೂ.20 ಸಾವಿರಗಳವರೆಗೆ ಗರಿಷ್ಠ ರೂ.30 ಸಾವಿರ ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಡಿಯಲ್ಲಿ 4(A) ಯಿಂದ 4(Z) ವರೆಗೂ ಬರುವ ಈಡಿಗ, ಬಂಧಾರಿ, ಬೆಲ್ಲದ್, ಬಿಲ್ಲವ, ಪೂಜಾರಿ, ದೀವರ, ಹಾಲ ಕ್ಷತ್ರಿಯ, ದೇಶ ಭಂಡಾರಿ, ದೇವರ, ದೇವರ ಮಕ್ಕಳು/ದೀವರ ಮಕ್ಕಳು, ಈಡಿಗ, ಎಳಿಗ, ಎಳವ, ಗಾಮಲ್ಲ, ಗೌಂಡ, ಹಳೇ ಪೈಕು, ಇಲ್ಲಾವನ್, ಕಲಾಲ್, ಮಲಯಾಳಿ ಬಿಲ್ಲವ, ನಾಡರ್, ನಾಮಧಾರಿ, ಥಿಯಾನ್, ಥಿಯ್ಯ, ಇಳಿಗ, ಗೊಂಡ್ಲ ಮತ್ತು ತಿಯನ್/ಥಯ್ಯಾನ್ ಜಾತಿಗೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

* ಗಂಗಾ ಕಲ್ಯಾಣ ನೀರಾವರಿ ಯೋಜನೆ: 

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆಬಾವಿಗೆ ರೂ.75 ಸಾವಿರ ಮೆಸ್ಕಾಂಗಳಿಗೆ ಪಾವತಿಸಲಾಗುತ್ತದೆ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50  ಸಾವಿರ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ. ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
 
* ಅರಿವು-ಶೈಕ್ಷಣಿಕ ಸಾಲ ಯೋಜನೆ:

ಈ ಯೋಜನೆಯಡಿ CET ಮತ್ತು  NEETಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ 4(A) ಯಿಂದ 4(Z) ವರೆಗೂ ಬರುವ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ ರೂ 5 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.

* ಸ್ವಾವಲಂಬಿ ಸಾರಥಿ ಯೋಜನೆ:

ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‍ಗಳಿಂದ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಟ ರೂ.3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುತ್ತದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ 4(A) ಯಿಂದ 4(Z) ವರೆಗೂ ಬರುವ ಈಡಿಗ ಮತ್ತು ಅದರ ಉಪಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ಒಳಗಿರಬೇಕು. 

ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು  ಡಿಸೆಂಬರ್ 16 ಕೊನೆಯ ದಿನ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮಗಳಿಂದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ  ಸಲ್ಲಿಸಬಹುದು. 

ಹೆಚ್ಚಿನ ಮಾಹಿತಿಗೆ  ನಿಗಮದ ವೆಬ್‍ಸೈಟ್ www.dbcdc.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 080-22374832/ 8050770004/  8050770005 ಕಛೇರಿಯ ದೂರವಾಣಿ ಸಂಖ್ಯೆ:0824-2456544 ಗಳನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.