Ambika College: ರಾಷ್ಟ್ರ ಮಟ್ಟದ ಕ್ರೀಡಾಪಟು, ಅಂಬಿಕಾ ಕಾಲೇಜಿನ ಪ್ರತೀಕ್ಷಾ ಶೆಣೈಗೆ ಸನ್ಮಾನ

Ambika College: ರಾಷ್ಟ್ರ ಮಟ್ಟದ ಕ್ರೀಡಾಪಟು, ಅಂಬಿಕಾ ಕಾಲೇಜಿನ ಪ್ರತೀಕ್ಷಾ ಶೆಣೈ ಅವರನ್ನು ಸನ್ಮಾನಿಸಲಾಯಿತು.

Jul 15, 2026 - 16:46
Jul 15, 2026 - 16:56
Ambika College: ರಾಷ್ಟ್ರ ಮಟ್ಟದ ಕ್ರೀಡಾಪಟು, ಅಂಬಿಕಾ ಕಾಲೇಜಿನ ಪ್ರತೀಕ್ಷಾ ಶೆಣೈಗೆ ಸನ್ಮಾನ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಸಂಯುಕ್ತಾಶ್ರಯದಲ್ಲಿ, ಮಂಗಳೂರಿನ ಎ.ಜೆ ಎಂಜಿನಿಯರಿಂಗ್ & ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳ ಅಭಿನಂದನಾ ಸಮಾರಂಭ ನಡೆಯಿತು. 

ಈ ಕಾರ್ಯಕ್ರಮದಲ್ಲಿ ಪಟ್ಟಣದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಗೌರವ ಸನ್ಮಾನ ಸ್ವೀಕರಿಸಿದರು.

ಪ.ಪೂ ಶಿಕ್ಷಣ ಇಲಾಖೆ (ಬೆಂಗಳೂರು) ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ಶಿವಮಾದಯ್ಯ, ಪ.ಪೂ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕಿ ಜಯಶ್ರೀ, ಕಿಟ್ಟೆಲ್ ಪ.ಪೂ ಕಾಲೇಜು ಪ್ರಾಂಶುಪಾಲ ವಿಠ್ಠಲ್, ನಾಲ್ಯಪದವು ಸರ್ಕಾರಿ ಪ.ಪೂ ಕಾಲೇಜು ಪ್ರಾಂಶುಪಾಲ ಜಯಾನಂದ ಸುವರ್ಣ, ರಾಜ್ಯ ಕ್ರೀಡಾ ಸಂಯೋಜಕ ಗೋಪಾಲ್, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮ್ ಶೆಟ್ಟಿ, ಎ.ಜೆ ತಾಂತ್ರಿಕ ಮಹಾವಿದ್ಯಾಲಯ ಕ್ಯಾಂಪಸ್ ನಿರ್ದೇಶಕ ಡಾ.ಜಿ ಜಯಪ್ರಕಾಶ್ ರಾವ್, ಪ್ರಭಾರ ಪ್ರಾಂಶುಪಾಲ ಡಾ.ಸಿ ಮಹಾಬಲೇಶ್ವರಪ್ಪ, ಅಡ್ಮಿಶನ್ & ಪ್ರಮೋಷನ್ ವಿಭಾಗದ ಡೀನ್ ಡಾ.ರಾಜೇಶ್ ರೈ, ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ ಉಪ ಪ್ರಾಂಶುಪಾಲ ಪ್ರದೀಪ್ ಕೆ.ವೈ ಹಾಗೂ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಸೇರಿದಂತೆ ಇತರರು ಇದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.