Ambika Vidyalaya: ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ
Ambika Vidyalaya: ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ಜರುಗಿದ 'ವಿದ್ಯಾಭಾರತಿ' ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ಜರುಗಿದ 'ವಿದ್ಯಾಭಾರತಿ' ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.
* 14 ವರ್ಷ ವಯೋಮಾನದ ಬಾಲಕಿಯರ ವಿಭಾಗ: 8ನೇ ತರಗತಿಯ ಸಾನ್ವಿ ಜಿ (ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿ ಪುತ್ರಿ), ಕೆ.ಎಂ ಶಮಿತಾ ಭಟ್ (ಪಡೀಲ್ ನಿವಾಸಿ ಸಂಜೀವ ರಂಜನ್ ಹಾಗೂ ಅರ್ಪಣಾ ಕುಮಾರಿ ದಂಪತಿ ಪುತ್ರಿ), ಶಾಂಭವಿ ರಂಜನ್ (ರವಿ ಕುಮಾರ್ ಕೆ ಮತ್ತು ಸುಮಿತ್ರಾ ಕೆ ದಂಪತಿ ಪುತ್ರಿ) ಪ್ರಥಮ ಸ್ಥಾನವನ್ನು ಪಡೆದ್ದಾರೆ. ಈ ಮೂಲಕ ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ಜಿಎಫ್ಐ (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

* 14ರ ವರ್ಷ ವಯೋಮಾನದ ಬಾಲಕರ ವಿಭಾಗ: 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ (ಉಪ್ಪಿನಂಗಡಿ ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಹಾಗೂ ಡಾ.ಶೈನಿ ಪಾಯಸ್ ದಂಪತಿ ಪುತ್ರ), ರತುಲ್ ಅದ್ವೈತ್ (ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿ ಪುತ್ರ), ಮಯೂರ್ ಎಸ್ ಮಯ್ಯ (ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ ಹಾಗೂ ಜಯಲಕ್ಷ್ಮೀ ಎಸ್ ಮಯ್ಯ), ತ್ರಿನಯ್ ರೈ (ಕಲ್ಲಾರೆ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ) ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.