ರಾಷ್ಟ್ರ ಮಟ್ಟದ ಈಜು ಸ್ಪರ್ಧೆ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿಗೆ 3 ಚಿನ್ನದ ಪದಕ

Indraprastha Vidyalaya: ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ, ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾರೆ.

Oct 16, 2026 - 12:54
ರಾಷ್ಟ್ರ ಮಟ್ಟದ ಈಜು ಸ್ಪರ್ಧೆ: ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿಗೆ 3 ಚಿನ್ನದ ಪದಕ

ಉಪ್ಪಿನಂಗಡಿ: ಪುಣೆಯಲ್ಲಿ 'ಅಂಡರ್ ವಾಟರ್ ಸ್ಪೋರ್ಟ್ ಫೆಡರೇಷನ್' ವತಿಯಿಂದ ಈಚೆಗೆ ಆಯೋಜಿಸಿದ್ದ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ, ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾರೆ.

8ನೇ ತರಗತಿಯ ಸಾನ್ವಿ ಸಿ.ಹೆಚ್, 50 ಮೀಟರ್ ಬೈಫಿನ್ಸ್, 50 ಮೀಟರ್ ಅಪ್ನಿಯಾ ಹಾಗೂ 4*100 ಮೀಟರ್ ಬೈಫಿನ್ಸ್ ರಿಲೇ ವಿಭಾಗದಲ್ಲಿ 3 ಚಿನ್ನ ಪದಕಗಳನ್ನು ಜಯಿಸಿದ್ದಾರೆ.

ಈ ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಮತ್ತು ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.